January 7, 2025

Newsnap Kannada

The World at your finger tips!

kangrass

ಕೆಪಿಸಿಸಿ ಕಚೇರಿಯಲ್ಲೇ ಕಾಂಗ್ರೆಸ್ ನಾಯಕರ ಹೊಡೆದಾಟ

Spread the love

ಕಾಂಗ್ರೆಸ್ ಎಂಎಲ್​ಸಿ ನಾರಾಯಣ ಸ್ವಾಮಿ ಮತ್ತು ಮುಖಂಡ ಮನೋಹರ್ ನಡುವೆ ಶುಕ್ರವಾರ ಮಧ್ಯಾಹ್ನ ಗಲಾಟೆ ನಡೆದು, ಉಭಯ ನಾಯಕರು ಕೈ-ಕೈ ಮಿಲಾಯಿಸಿಕೊಂಡಿರುವ ಘಟನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜರುಗಿದೆ.

ಕಾರ್ಯಾಧ್ಯಕ್ಷರುಗಳ ಸಮ್ಮುಖದಲ್ಲಿಯೇ ಈ ಗಲಾಟೆ ನಡೆದಿದೆ, ಮಾಧ್ಯಮದವರು ಸ್ಥಳಕ್ಕೆ ಹೋಗುತ್ತಿದ್ದಂತೆ ಕಚೇರಿಯ ಬಾಗಿಲನ್ನು ಕಾಂಗ್ರೆಸ್​ ಮುಖಂಡರು ಬಂದ್ ಮಾಡಿಕೊಂಡರು.

ಕೆಲ ಸಮಯದ ಬಳಿಕ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಕೆಪಿಸಿಸಿ ಕಚೇರಿಯಿಂದ ಹೊರನಡೆದರು. ಆದರೆ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯಾವುದೇ ಗಲಾಟೆ ನಡೆದಿಲ್ಲ ಎಂದು ಹಾರಿಕೆ ಉತ್ತರ ನೀಡಿದರು.

ಇಂದು ಬೆಳಗ್ಗೆ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಅವರು ನಮ್ಮ ಸದಸ್ಯರನ್ನು ಸೆಳೆಯುವ ಕೆಲಸ ಮಾಡಿದ್ದರು. ಆ ವಿಚಾರವಾಗಿ ಜೋರುಜೋರು ಮಾತು ನಡೆಯಿತು.
ಆದರೆ ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ. ನಾವು ಬಾಗಿಲು ಹಾಕಿ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಚರ್ಚೆಯನ್ನ ಹೊರತುಪಡಿಸಿ ಬೇರೆ ಏನು ಆಗಿಲ್ಲ ಎನ್ನುವ ಮೂಲಕ ಘಟನೆಯನ್ನು ಮುಚ್ಚಿಹಾಕಲು ಯತ್ನಿಸಿದರು.

Copyright © All rights reserved Newsnap | Newsever by AF themes.
error: Content is protected !!