ವಿರೋಧ ಪಕ್ಷಗಳು ಕೇವಲ ವಿರೋಧ ಮಾಡಬಾರದು. ಜನರಿಗೆ ಉಪಯೋಗವಾಗುವ ಕೆಲಸ ಕಾರ್ಯಗಳಿಗೆ ಸಲಹೆ ನೀಡಿ ಪ್ರೋತ್ಸಾಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಮೈಸೂರಿನಲ್ಲಿ ಗುರುವಾರ ಮಾತನಾಡಿದ ಅವರು, ವ್ಯಾಕ್ಸಿನ್ ಹಂಚಿಕೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ರಚನಾತ್ಮಕ ಕೆಲಸಗಳಿಗೆ ಕೈಜೋಡಿಸಬೇಕು. ರಾಹುಲ್ ಗಾಂಧಿ ಅವರು ಮಾಡುವ ಆರೋಪದಲ್ಲಿನ ಸತ್ಯಾಂಶ ಜನತೆಗೆ ಗೊತ್ತಿದೆ. ವಿಶ್ವಕ್ಕೆ ಪ್ರಧಾನಿ ಮೋದಿ ಅವರು ಏನೆಂಬುದು ಗೊತ್ತಿದೆ ಎಂದರು.
ಉದ್ಯೋಗ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿ
ಕರೋನಾ ಲಾಕ್ ಡೌನ್ ನಂತರ ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ನಿರೀಕ್ಷೆಗೂ ಮೀರಿ ಕೈಗಾರಿಕೆಗಳು ಅಭಿವೃದ್ಧಿ ಕಾಣುತ್ತಿವೆ. ದೇಶದಲ್ಲಿ ಬಂಡವಾಳ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಮುಂದಾಗಿದ್ದಾರೆ ಎಂದು ತಿಳಿಸಿದರು.
ಲಾಕ್ ಡೌನ್ ಸಮಯದಲ್ಲಿ ಸ್ವಗ್ರಾಮಗಳಿಗೆ ತೆರಳಿದ ಕಾರ್ಮಿಕರು ಹಿಂತಿರುಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಜನ ಉದ್ಯೋಗಿಗಳು ರಾಜ್ಯಕ್ಕೆ ಆಗಮಿಸಿ ಕೌಶಲ್ಯಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಉದ್ಯೋಗ ಸೃಷ್ಟಿಸಲು ಕೊಪ್ಪಳದಲ್ಲಿ ವಿನೂತನ ಗೊಂಬೆಗಳ ತಯಾರಿಕೆಗೆ ಮುಂದಾಗಿದ್ದೇವೆ. ಇದರಿಂದ 20 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುತ್ತೇವೆ ಎಂದು ಮಾಹಿತಿ ನೀಡಿದರು.
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
More Stories
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ