May 29, 2022

Newsnap Kannada

The World at your finger tips!

rahul

ಕಾಂಗ್ರೆಸ್‌ಗೆ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು: ರಾಹುಲ್

Spread the love

ರಾಜ್ಯದಲ್ಲಿ ನಡೆಯುವ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು. ಇದು ನಾನು ನಿಮಗೆ ಕೊಡುತ್ತಿರುವ ಟಾಸ್ಕ್ ಎಂದು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಕುರಿತಾಗಿ ಮಾತನಾಡಿ, ಕರ್ನಾಟಕ ಸ್ಪಿರಿಟ್ ಅಫ್ ಕಾಂಗ್ರೆಸ್ ಪಾರ್ಟಿ ಎಂದರು

ದೇಶ, ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿವೆ. ಬಿಜೆಪಿ ಸರ್ಕಾರ ಹಣದ ಮೇಲೆ ಅಧಿಕಾರಕ್ಕೆ ಬಂದಿದೆ. ಪ್ರಸಕ್ತ ವಿಷಯಗಳನ್ನು ಜನರಿಗ ಮುಟ್ಟಿಸಿ. ಪಕ್ಷದಲ್ಲಿ ಯಾರು ಕೆಲಸ ಮಾಡ್ತಾರೆ, ಯಾರು ಮಾಡುತ್ತಿಲ್ಲ ಮೊದಲು ಪತ್ತೆ ಹಚ್ಚಿ. ಎಲ್ಲರೂ ನೀವು ನೆನಪಿಡಬೇಕು. ಟಿಕೆಟ್ ನಿಮಗೆ ಸುಲಭವಾಗಿ ಸಿಗುವುದಿಲ್ಲ. ಯಾರು ಪಕ್ಷಕ್ಕಾಗಿ ದುಡಿಯುತ್ತಾರೆ ಅವರಿಗೆ ಮಾತ್ರ. ಪಕ್ಷ ಸಂಘಟನೆ ಮಾಡುವವರಿಗೆ ಟಿಕೆಟ್ ಈ ಎಲ್ಲಾ ವಿಷಯಗಳನ್ನು ಕಾರ್ಯಕರ್ತರು ಜನರಿಗೆ ತಲುಪಿಸಿ. ಸರ್ಕಾರದ ವಿರುದ್ಧ ಹೋರಾಟಗಳನ್ನು ರೂಪಿಸಿ. ಕಾರ್ಯಕರ್ತರು ಈ ಕೆಲಸ ಮೊದಲು ಮಾಡಬೇಕು ಎಂದು ಮುಖಂಡರು ಮತ್ತು ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಟಾಸ್ಕ್ ನೀಡಿದರು.

ನೋಟ್ ಬ್ಯಾನ್, ವಿವಾದಾತ್ಮಕ ರೈತ ಕಾಯ್ದೆಗಳು. ಜಿಎಸ್‍ಟಿ ದೇಶದ ಜನರನ್ನು ಸಂಕಷ್ಟಕ್ಕೆ ದೂಡಿದವು. ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಇದೆಲ್ಲವೂ ಆಯ್ತು. ದೇಶದಲ್ಲಿ ಉದ್ಯೋಗ ಸೃಷ್ಟಿಯಾಗ್ತಿಲ್ಲ. ಸಣ್ಣ ಪುಟ್ಟ ಕೈಗಾರಿಕೆಗಳು ಮುಚ್ಚಿಹೋಗಿವೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ.

ಪ್ರಧಾನಿ ಭ್ರಷ್ಟಾಚಾರದ ಬಗ್ಗೆ ಮಾತನಾಡ್ತಿದ್ರು. ಈ ಹಿಂದೆ ಕರ್ನಾಟಕದಲ್ಲಿ ಭ್ರಷ್ಟಾಚಾರ ಇದೆ ಎಂದು ಆರೋಪಿಸಿದರು. ಇವತ್ತು 40% ಸರ್ಕಾರ ಕರ್ನಾಟಕದಲ್ಲಿದೆ. ಈ ಆರೋಪ ಕಾಂಗ್ರೆಸ್ ಪಕ್ಷ ಮಾಡ್ತಿರೋದಲ್ಲ. ಬದಲಾಗಿ ಕಂಟ್ರಾಕ್ಟರ್ ಅಸೋಸಿಯೇಷನ್ ಮಾಡಿದೆ. ಇದರ ಬಗ್ಗೆ ಪ್ರಧಾನಿಯವರು ಚಕಾರವೆತ್ತುತ್ತಿಲ್ಲ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

error: Content is protected !!