February 21, 2026

Newsnap Kannada

The World at your finger tips!

belur

ಬೇಲೂರು ಪುರಸಭೆಯಲ್ಲಿ ಕಾಂಗ್ರೆಸ್ ಗೆ 17 ಸ್ಥಾನ – ನಿಚ್ಚಳ‌ ಬಹುಮತ: ಜೆಡಿಎಸ್ ಗೆ ಮುಖಭಂಗ – ಬಿಜೆಪಿ ಮೂಲೆಗುಂಪು

Spread the love

ಹಾಸನದ ಬೇಲೂರು ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶದಲ್ಲಿ‌ 17 ಸ್ಥಾನ ಗೆದ್ದ ಕಾಂಗ್ರೆಸ್ ಭರ್ಜರಿ ಜಯ ಭೇರಿ ಬಾರಿಸಿ, ಜೆಡಿಎಸ್ ಭದ್ರಕೋಟೆ ಯನ್ನು ಕಾಂಗ್ರೆಸ್ ಛಿದ್ರ ಮಾಡಿದೆ.

ಕಳೆದ ಬಾರಿ ಚುನಾವಣೆಯಲ್ಲಿ 13 ಸ್ಥಾನಗಳನ್ನು ಗೆದ್ದಿದ್ದ ಜೆಡಿಎಸ್ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿತ್ತು. ಆದರೆ ಈ ಬಾರಿ ಕೇವಲ 5 ಸ್ಥಾನಗಳಿಗೆ ಸೀಮಿತವಾಗಿ ತೀವ್ರ ಮುಖಭಂಗ ಅನುಭವಿಸಿದೆ.

ಕಾಂಗ್ರೆಸ್ 17 ಸ್ಥಾನ ಪಡೆದು ಭರ್ಜರಿ ಗೆಲುವು ಸಾಧಿಸಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡ ಹಾಗೂ ಬಿಜೆಪಿಯ ಜಿಲ್ಲಾಧ್ಯಕ್ಷರಾಗಿರುವ ಹುಲ್ಲಹಳ್ಳಿ ಸುರೇಶ್ ಗೌಡ ಕೂಡ ಬೇಲೂರು ತಾಲ್ಲೂಕಿನವರು ಆದರೂ ಇಲ್ಲಿ ಬಿಜೆಪಿ ನೆಲಕಚ್ಚಿ, ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಜೆಡಿಎಸ್ ಶಾಸಕರಿದ್ದರೂ ಅಲ್ಲಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದೆ.

error: Content is protected !!