ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸ್ ಪೇದೆ ಪರಸಪ್ಪ ಕೊನ್ನೂರು (27) ಆತ್ಮಹತ್ಯೆಗೆ ಶರಣಾಗಿದ್ದಾರೆ, ಈ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಜರುಗಿದೆ .ಪರಸಪ್ಪ ಮೈಸೂರಿನ ದೇವರಾಜ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದರು. 2016 ನೇ ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದರು.
ಉತ್ತರ ಕರ್ನಾಟಕ ಮೂಲದವರಾದ ಪರಸಪ್ಪ ಅವರಿಗೆ ಒಂದೂವರೆ ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಇಂದು ಬೆಳಿಗ್ಗೆ ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕ್ವಾಟ್ರಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಜರಬಾದ್ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು