January 10, 2025

Newsnap Kannada

The World at your finger tips!

sports1

2 ಕೋಟಿ ರು ವೆಚ್ಚದಲ್ಲಿ ಮಂಡ್ಯದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯ ನಿರ್ಮಾಣ

Spread the love

ಮಂಡ್ಯದ ಕ್ರೀಡಾ ವಿದ್ಯಾರ್ಥಿನಿ ಯರಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಜಿಲ್ಲೆಯಲ್ಲಿ ಮೊದಲ ಬಾಲಕಿಯರ ಕ್ರೀಡಾ ವಸತಿ ನಿಲಯ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಅಲ್ಲದೆ ವೈಜ್ಞಾನಿಕವಾಗಿ ಕ್ರೀಡಾ ಪಟುಗಳಲ್ಲಿರುವ ಕ್ರೀಡಾ ಸಾಮರ್ಥ್ಯ ಗುರುತಿಸುವಂತ ಕ್ರೀಡಾ ವಿಜ್ಞಾನ ಕೇಂದ್ರ 2 ಕೋಟಿ ರು ವೆಚ್ಚದಲ್ಲಿ ಸ್ಥಾಪಿಪನೆಯಾಗುತ್ತಿದೆ.

ಜಿಲ್ಲೆಯಲ್ಲಿ ಬಾಲಕಿಯರ ವಸತಿ ನಿಲಯ:

ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೆ ವಸತಿ ನಿಲಯವೇ ಇಲ್ಲದ ಕಾರಣ ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳಿಗೆ ಅವಕಾಶ ಮರೀಚಿಕೆಯಾಗುತ್ತಿತ್ತು. ಅದರಲ್ಲೂ ವಿಶೇಷವಾಗಿದೆ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವುದಕ್ಕೆ ಬಹಳ ಕಠಿಣ ಪರಿಸ್ಥಿತಿ ಇತ್ತು. ಬಾಲಕಿಯರೂ ಕ್ರೀಡೆಯಲ್ಲಿ ಸಾಧನೆ ತೋರಿಸುವುದಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಆಗಿರುವ ಸಚಿವ ನಾರಾಯಣಗೌಡ ಮಂಡ್ಯ ಜಿಲ್ಲೆಗೆ 2 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯವನ್ನು ಮಂಜೂರು ಮಾಡಿಸಿದ್ದಾರೆ.

ಜಿಲ್ಲೆಯಲ್ಲೇ ಬಾಲಕಿಯರಿಗೆ ಕ್ರೀಡಾ ವಸತಿನಿಲಯ ಇರಲಿಲ್ಲ. ಈಗ ಸರ್ಕಾರ ವಸತಿನಿಲಯ ಮಂಜೂರು ಮಾಡಿದೆ. ಹೀಗಾಗಿ ಈ ಎಲ್ಲಾ ಕ್ರೀಡಾ ಸಾಧಕರಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ವಿದ್ಯಾರ್ಥಿನಿಯರು ಮಿಂಚಲು ಅವಕಾಶವಾಗಲಿದೆ.

ಕ್ರೀಡೆಯಲ್ಲಿ ಸಾಧನೆ ತೋರುವ ಕನಸು ಹೊತ್ತಿರುವ ಅದೆಷ್ಟೋ ಬಾಲಕಿಯರಿಗೆ ಇದು ವರದಾನವಾಗಲಿದೆ ಎಂದು ಮಂಡ್ಯ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಅನಿತಾ ಅಭಿಪ್ರಾಯಪಟ್ಟಿದ್ದಾರೆ.

ಶೀಘ್ರದಲ್ಲೆ ಶಂಕುಸ್ಥಾಪನೆ

ಬಾಲಕಿಯರ ಕ್ರೀಡಾ ವಸತಿನಿಲಯ ಕಟ್ಟಡಕ್ಕೆ ಶೀಘ್ರದಲ್ಲೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಅಲ್ಲದೆ 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದ್ದಾರೆ‌.

Copyright © All rights reserved Newsnap | Newsever by AF themes.
error: Content is protected !!