December 23, 2024

Newsnap Kannada

The World at your finger tips!

congress , mandya , BJP

Congress leaders who day dream of power - CM ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು - ಸಿಎಂ

ಮತಾಂತರ ನಿಷೇಧ ಕಾನೂನು ಜಾರಿಗೆ ಚಿಂತನೆ: ಸಿಎಂ

Spread the love

ರಾಜ್ಯದಲ್ಲೂ ಮತಾಂತರ ನಿಷೇಧ ಕಾನೂನು ಜಾರಿಗೆ ಚಿಂತನೆ ನಡೆದಿದೆ .

ಈ ವಿಷಯವನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಒತ್ತಾಯ ಪೂರ್ವಕವಾಗಿ ಮತಾಂತರ ಮಾಡಬಾರದು. ಆ ನಿಟ್ಟಿನಲ್ಲಿ ಕಾನೂನು ಮಾಡಲು ಚಿಂತನೆ ನಡೆದಿದೆ. ಅದಕ್ಕಾಗಿ ಬೇರೆ ಬೇರೆ ರಾಜ್ಯದ ಕಾನೂನು ತರಿಸಿಕೊಳ್ಳಲಾಗಿದ್ದು, ಅಧ್ಯಯನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆಮಿಷವೊಡ್ಡುವುದು, ಬಲವಂತದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಮೋಹನ್ ಗೌಡ, ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ, ಹಿಂದೂ ಧಾರ್ಮಿಕ ಸಂಸ್ಥೆಗಳ 50ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮತಾಂತರವನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!