ಬೆಂಗಳೂರು: ಕಾರ್ಯ ನಿರತ ಪತ್ರಕರ್ತರಾಗಿದ್ದು ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಗರಿಷ್ಠ 5 ಲಕ್ಷ ರೂ ನೀಡುತ್ತಿರುವ ನೆರವನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಪತ್ರಕರ್ತರ ಕಲ್ಯಾಣಕ್ಕೆ ಪೂರಕವಾದ ಬೇಡಿಕೆಗಳ ಈಡೇರಿಕೆಗೆ ಬಜೆಟ್ ನಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಲ್ಲದೆ ಹಾಲಿ ನೀಡಲಾಗುತ್ತಿರುವ ನೆರವನ್ನು ಮುಂದುವರೆಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ವಿಜಯಪುರ ವಿವಿಯಲ್ಲಿ ಹಿರಿಯ ಪತ್ರಕರ್ತರಾದ ಮೊಹರೆ ಹಣುಮಂತರಾಯ ಬೆಂಗಳೂರು ವಿವಿಯಲ್ಲಿ ಎಚ್.ಎಸ್.ದೊರೆಸ್ವಾಮಿ ಮತ್ತು ಧಾರವಾಡ ವಿಶ್ವವಿದ್ಯಾಲಯಗಳಲ್ಲಿ ಹಿರಿಯ ಪತ್ರಕರ್ತರಾದ ಪಾಟೀಲ್ ಪುಟ್ಟಪ್ಪ (ಪಾಪು) ಅವರ ಹೆಸರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಆಧ್ಯಯನಪೀಠ ಸ್ಥಾಪಿಸಬೇಕೆಂಬ ಸಂಘದ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ತಾಲ್ಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಹಣಕಾಸು ಸ್ಥಿತಿ ನೋಡಿ ನೆರವು, ಬಸ್ ಪಾಸ್, ಜಾಹೀರಾತು ಹಣ ಶೀಘ್ರ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ನಿಯೋಗದಲ್ಲಿ ಕೆಯುಡಬ್ಲ್ಯಜೆ ಪ್ರಧಾನ ಕಾರ್ಯದರ್ಶಿ ಲೊಕೇಶ್, ನಿರ್ದೇಶಕರಾದ ಎನ್.ರವಿಕುಮಾರ್, ಜೆ.ಆರ್.ಕೆಂಚೇಗೌಡ, ಚೆಲುವರಾಜ್, ದೇವೇಂದ್ರಪ್ಪ ಕಪನೂರು, ಸೋಮಶೇಖರ ಕೆರಗೋಡು, ಮುನಿಕೃಷ್ಣಪ್ಪ, ಗಣಪತಿ ಗಂಗೊಳ್ಳಿ, ದೇವರಾಜು,
ತೇಜಸ್ವಿನಿ, ರಶ್ಮಿಪಾಟೀಲ್ ಮೊದಲಾದವರಿದ್ದರು.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ