December 22, 2024

Newsnap Kannada

The World at your finger tips!

4db6e237 5379 4d9d bc83 e0b1958a0310

ಗುತ್ತಿಗೆದಾರರು ಗ್ರಾ.ಪಂ.ಗೆ ಸ್ಪರ್ಧೆ ಮಾಡುವಂತಿಲ್ಲ – ಆಯೋಗ

Spread the love

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

ಗುತ್ತಿಗೆದಾರರು ಪ್ರಸ್ತುತ ಗ್ರಾಮ ಪಂಚಾಯತ್ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಈ ವಿಷಯದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ಇಲ್ಲವಾದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ.

ಆದರೆ, ಒಂದು ವೇಳೆ ಅಭ್ಯರ್ಥಿಯೊಬ್ಬರು ಈ ಬಗ್ಗೆ ಮಾಹಿತಿಯನ್ನು ಸೂಕ್ತ ದೃಢೀಕರಣದೊಂದಿಗೆ ನೀಡಿದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಗ್ರಾಮ ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗ ವಿಧಿಸಿರುವ ಕೆಲವು ಷರತ್ತುಗಳು ಹೀಗಿವೆ.

  1. ಗಂಡ ಸರ್ಕಾರಿ ನೌಕರನಾಗಿದ್ದರೆ ಹೆಂಡತಿ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ರೀತಿ ಹೆಂಡತಿ ಸರ್ಕಾರಿ ನೌಕರಳಾಗಿದ್ದಲ್ಲಿ ಗಂಡ ಕೂಡ ಸ್ಪರ್ಧೆ ಮಾಡಬಹುದು.
  2. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಹಾಗೂ ಸೂಚಕ ಗ್ರಾಮ ಪಂಚಾಯತ್ ಮತದಾರನಾಗಿರಬೇಕು.
  3. ಮೀಸಲು ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಂದ ಅಧಿಕೃತ ಮೂಲ ಜಾತಿ ಪ್ರಮಾಣ ಪತ್ರವನ್ನು ಪಡೆದು ಕೊಳ್ಳಬೇಕು.
  4. ಚುನಾವಣೆಗೆ ಸಾಮಾನ್ಯ ವರ್ಗಕ್ಕೆ 200 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಹಾಗೂ ಮಹಿಳಾ ಮೀಸಲಾತಿಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 100 ರೂ ಠೇವಣಿ ನಿಗದಿ ಪಡಿಸಲಾಗಿದೆ.
  5. ಒಬ್ಬ ಅಭ್ಯರ್ಥಿಗೆ ಸೂಚಕರಾಗಿರುವವರು ಸಹ ಅಭ್ಯರ್ಥಿಯಾಗಲು ಅವಕಾಶವಿದೆ.
  6. ಗ್ರಾಮ ಪಂಚಾಯತ್ ಸದಸ್ಯನಾಗಲು ಕನಿಷ್ಠ 21 ವರ್ಷ ತುಂಬಿರಬೇಕು.
  7. ಪರಿಶಿಷ್ಟ ಜಾತಿ ಪ್ರವರ್ಗಕ್ಕೆ ಮೀಸಲಾಗಿರುವ ಸ್ಥಾನಕ್ಕೆ ಯಾವುದೇ ನಾಮಪತ್ರ ಬಾರದೇ ಇದ್ದ ಪಕ್ಷದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ
  8. ಹಿಂದುಳಿದ ವರ್ಗ ಎ ಮತ್ತು ಹಿಂದುಳಿದ ವರ್ಗ ಬಿ ಪ್ರವರ್ಗಕ್ಕೂ ಸಹ ಅನ್ವಯವಾಗುತ್ತದೆ.
  9. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ಮೀಸಲಿಟ್ಟಿರುವ ಪ್ರವರ್ಗದ ವ್ಯಕ್ತಿಯಿಂದ ನಾಮಪತ್ರ ಸ್ವೀಕೃತವಾದರೆ, ಬೇರೆ ಪ್ರವರ್ಗದ ವ್ಯಕಿ ಸಲ್ಲಿಸಿರುವ ನಾಮಪತ್ರವನ್ನು ಠೇವಣಿ ಹಣದೊಂದಿಗೆ ಹಿಂತಿರುಗಿಸಬೇಕಾಗುತ್ತದೆ.
Copyright © All rights reserved Newsnap | Newsever by AF themes.
error: Content is protected !!