ಕರ್ನಾಟಕ ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ, ‘ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕ ಸರ್ಕಾರ ಕೂಡ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ. ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಾಗಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ , ಕೇವಲ ಮದುವೆ ಉದ್ದೇಶಕ್ಕಾಗಿ ಮತಾಂತರ ಆಗುವುದನ್ನು ಒಪ್ಪಲಾಗದು ಎಂದು ತೀರ್ಪು ನೀಡಿತ್ತು. ತಮ್ಮ ಮದುವೆ ಬಳಿಕ ಮೂರು ತಿಂಗಳ ರಕ್ಷಣೆ ನೀಡುವಂತೆ ಮನವಿ ಮಾಡಿದ ಜೋಡಿಯೊಂದರ ಅರ್ಜಿಗೆ ಮಧ್ಯಪ್ರವೇಶಿಸಲು ನಿರಾಕರಿಸುತ್ತಾ ಕೋರ್ಟ್ ಈ ತೀರ್ಪು ನೀಡಿತ್ತು.
More Stories
ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
ರಾಜ್ಯಗಳಾದ್ಯಂತ `ED’ ದಾಳಿ: ಲಾಟರಿ ಕಿಂಗ್ ಮಾರ್ಟಿನ್ನ 12.41 ಕೋಟಿ ನಗದು ಜಪ್ತಿ
ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ