ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಲಾಕಪ್ ಚಿಲಕ ತೆಗೆದು ಆರೋಪಿ ಠಾಣೆಯಿಂದ ಎಸ್ಕೇಪ್ ಆಗಿರುವ ಪ್ರಕರಣದ ನಿರ್ಲಕ್ಷ್ಯ ತೋರಿದ ಐವರು ಪೊಲೀಸರು ಸಸ್ಪೆಂಡ್ ಮಾಡಲಾಗಿದೆ.
ಘಟನೆಯ ವಿವರ :
12 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಲಾಕಪ್ನ ಚಿಲಕ ತೆಗೆದು ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದಾನೆ.
ಈ ಹಿನ್ನೆಲೆ ಕರ್ತವ್ಯ ಲೋಪ ಎಸಗಿದ್ದಕ್ಕೆ ಎಎಸ್ಐ ಸೇರಿ 4 ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.
ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಬಂಧಿಸಿ ಇಡಲಾಗಿತ್ತು.
ಈ ವೇಳೆ ಆರೋಪಿ ಲಾಕಪ್ನ ಚಿಲಕ ತೆಗೆದು ಎಸ್ಕೇಪ್ ಆಗಿದ್ದ. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಐವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಫೋಸ್ಕೋ ಪ್ರಕರಣದ ಆರೋಪಿ ಅರೆಸ್ಟ್ ಆಗಿದ್ದ. ನಂತರ ಲಾಕಪ್ ಚಿಲಕ ತೆಗೆದು ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನ ಕೊಪ್ಪ ಪಟ್ಟಣದಲ್ಲಿ ಮತ್ತೆ ಬಂಧಿಸಲಾಗಿದೆ.
More Stories
ಧಾರವಾಡದಲ್ಲಿ ನಕಲಿ ನೋಟು ಚಲಾವಣೆ: ಬಿಜೆಪಿ ಮುಖಂಡ ಸೇರಿ ಮೂವರು ಬಂಧನ
ಮಗಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಂತವೈದ್ಯೆ – ಸಾವಿಗೆ ಹಲವು ಅನುಮಾನ
ಪ್ರವೀಣ್ ನೆಟ್ಟಾರು ಹತ್ಯೆ – ಮತ್ತಿಬ್ಬರು ಸೇರಿ 6 ಮಂದಿ ಬಂಧನ