December 22, 2024

Newsnap Kannada

The World at your finger tips!

bomb , blast , terrorist

Cooker bomb culprit was caught in Mangalore ತುಂಗಾ ನದಿ ತೀರದಲ್ಲಿ ಸ್ಫೋಟ ಮಾಡಿ ಎಸ್ಕೇಪ್ ಆಗಿದ್ದ ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

ತುಂಗಾ ನದಿ ತೀರದಲ್ಲಿ ಸ್ಫೋಟ ಮಾಡಿ ಎಸ್ಕೇಪ್ ಆಗಿದ್ದ ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

Spread the love

ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್‌ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕ್ರಿಮಿನಲ್‌ ಮಂಗಳೂರಿನಲ್ಲಿ ಕುಕ್ಕರ್‌ಬಾಂಬ್‌ ಸ್ಫೋಟ ಮಾಡಿ ಸಿಕ್ಕಿ ಬಿದ್ದಿದ್ದಾನೆ.


ಮಂಗಳೂರಿನಲ್ಲಿ ಬಾಂಬ್‌ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್‌ ವಿಳಾಸ ನೀಡಿದ್ದ ಬೆನ್ನಲ್ಲೇ ಆತ ಯಾರು? ಆತನ ಮೂಲ ಯಾವುದು ಎನ್ನುವುದರ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣ : ಅನುಮಾನಸ್ಪದ ವಸ್ತುಗಳು ಪತ್ತೆ – ಉಗ್ರ ಕೃತ್ಯ DGP

ತುಂಗಾ ನದಿಯ ತೀರದಲ್ಲಿ ಬಾಂಬ್‌ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್‌ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್‌(21) ಮತ್ತು ಮಂಗಳೂರಿನ ಮಾಜ್‌ ಮುನೀರ್‌ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್‌ ನಾಪತ್ತೆಯಾಗಿದ್ದನು.


ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಕುಕ್ಕರ್‌ ಬ್ಲಾಸ್ಟ್‌ ಮಾಡಿ ಸಿಕ್ಕಿಬಿದ್ದಿದ್ದಾನೆ. ಆಟೋದಲ್ಲಿ ಕುಕ್ಕರ್‌ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ  ಶಾರೀಕ್‌ಗೆ ಈಗ ಮಂಗಳೂರಿನ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Copyright © All rights reserved Newsnap | Newsever by AF themes.
error: Content is protected !!