November 23, 2024

Newsnap Kannada

The World at your finger tips!

WhatsApp Image 2022 10 19 at 3.32.29 PM

Cooperation of senior students is essential for development of Mandya VV: Dr. Puttaraju ಮಂಡ್ಯ ವಿ ವಿ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ: ಡಾ.ಪುಟ್ಟರಾಜು

ಮಂಡ್ಯ ವಿ ವಿ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ: ಡಾ.ಪುಟ್ಟರಾಜು

Spread the love

ಮಂಡ್ಯ ವಿಶ್ವವಿದ್ಯಾಲಯದ ಅಭಿವೃದ್ದಿಗೆ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ವಿಧ್ಯಾಭ್ಯಾಸ ನಡೆಸಿದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಬುಧವಾರ ತಿಳಿಸಿದರು.

ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯ ಪೂರ್ವ ಭಾವಿ ಸಭೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಡಾ ಪುಟ್ಟರಾಜು ಮಾತನಾಡಿದರು.ಕಾಂಗ್ರೆಸ್ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

ಹಿರಿಯ ವಿದ್ಯಾರ್ಥಿಗಳನ್ನು ಒಂದು ಕಡೆ ಕ್ರೋಡಿಕರಿಸಿ ಅವರ ಸಲಹೆಯನ್ನು ತೆಗೆದುಕೊಂಡು ಮಂಡ್ಯ ವಿಶ್ವವಿದ್ಯಾಲಯಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ವಿಶ್ವವಿದ್ಯಾಲಯವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂಬುದು ನಮ್ಮೆಲ್ಲರ ಮನದಾಸೆಯಾಗಿದೆ ಎಂದರು.

ಅ . 22 ರಂದು ಬೆಳಿಗ್ಗೆ 11ಗಂಟೆಗೆ ಆಡಳಿತ ಭವನದಲ್ಲಿ ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಸಭೆಯನ್ನು ಆಯೋಜಿಸಿ ಸದಸ್ಯತ್ವದ ನೋಂದಣಿಯ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಸದಸ್ಯತ್ವದ ನೋಂದಣಿಯ ನಂತರ ಹಳೆಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷರು ಪದಾಧಿಕಾರಿಗಳನ್ನು ಚುನಾವಣೆ, ಆಯ್ಕೆ, ಅಥವಾ ಎಲ್ಲರ ಸಮ್ಮತಿಯ ಮೂಲಕ ನೇಮಕ ಮಾಡವುದಕ್ಕೆ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.

ಕಾಲೇಜು ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯವಾಗಿ ಮಾರ್ಪಾಡಾದ ವರೆಗೆ 30 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಹಲವಾರು ವಿಧ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಹಳೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಹಕಾರವನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ನಾಗರಾಜ್ ಜಿ. ಚೊಳ್ಳಿ, ಹಣಕಾಸು ಅಧಿಕಾರಿಗಳಾದ ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!