ಅಕ್ಟೋಬರ್- ನವೆಂಬರ್ ವೇಳೆಗೆ ಕೊರೋನಾ 3ನೇ ಅಲೆ – ತಜ್ಞರ ಎಚ್ಚರಿಕೆ

Team Newsnap
1 Min Read
  • ಬೆಂಗಳೂರಿನಲ್ಲಿ 4,500 ಐಸಿಯು ಬೆಡ್​ಗಳನ್ನು ಸಿದ್ಧಪಡಿಸಿಕೊಳ್ಳಿ
  • ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ

ರಾಜ್ಯದಲ್ಲಿ
ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಕೊರೋನಾ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ.

ಈ ಬಗ್ಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕು ಅಂತ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.‌

ಮೂರನೇ ಅಲೆ ಎದುರಿಸಲು ಐಸಿಯು ಬೆಡ್ ಸಿದ್ಧಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 4,500 ಐಸಿಯು ಬೆಡ್​ಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೀಗ ತಜ್ಞರು ಸಲಹೆ ನೀಡಿದ್ದಾರೆ. ಅಕ್ಟೋಬರ್ ಅಥವಾ ನವೆಂಬರ್​ನಿಂದ ಮೂರನೇ ಅಲೆ ಸಾಧ್ಯತೆಯಿದೆ. ಎರಡನೇ ಅಲೆಯ ವೇಳೆಯಲ್ಲಿ ಮಾಡಿದಂತೆ ಬೇಜವಾಬ್ದಾರಿ ಮಾಡಬೇಡಿ. ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಸಾವು-ನೋವು ಹೆಚ್ಚಾಗುತ್ತದೆ. ರಾಜ್ಯದಲ್ಲಿ ಸದ್ಯ 1,300 ಐಸಿಯು ಬೆಡ್​ಗಳು ಲಭ್ಯವಿದೆ.
ಇದರ ಜೊತೆ ಬೆಂಗಳೂರನ್ನು ಹೊರತುಪಡಿಸಿ 1 ಸಾವಿರ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಿ ಎಂದು ತಜ್ಞರು ಹೇಳಿದ್ದಾರೆ.

Share This Article
Leave a comment