ಮಂಡ್ಯದಲ್ಲಿ ಕರೊನಾ 2ನೇ ಅಲೆ ಆರ್ಭಟ ಜೋರಾಗಿದೆ.
ಶುಕ್ರವಾರ 1300 ಕ್ಕೂ ಹೆಚ್ಚು ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
ಮಂಡ್ಯ ಜಿಲ್ಲೆಯ ಹಳ್ಳಿ ಹಳ್ಳಿಗೆ ಹಬ್ಬಿರುವ ಕೊರೊನಾ ಮಹಾಮಾರಿ ವ್ಯಾಪಿಸುತ್ತಿದೆ.
ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚು ವ್ಯಾಪಿಸಿದೆ.
ಒಂದು ಗ್ರಾಮದಲ್ಲಿ 40, ಮತ್ತೊಂದು ಗ್ರಾಮದಲ್ಲಿ 17 ಮಂದಿಗೆ ಸೋಂಕು.
ಪಾಂಡವಪುರ ತಾಲ್ಲೂಕಿನ ಕಣಿವೆ ಕೊಪ್ಪಲು ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆ ಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸಿ ಎಸ್ ಪುಟ್ಟರಾಜು, ಅಧಿಕಾರಿ ಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಿದ್ದಾರೆ. ಅಲ್ಲದೇ ಗ್ರಾಮಕ್ಕೆ ಯಾರೇ ಬರುವುದನ್ನು ಅಥವಾ ಗ್ರಾಮದಿಂದ ಹೊರ ಹೋಗುವುದಕ್ಕೆ ನಿರ್ಬಂಧ ಹೇರಲಾಗಿದೆ. ಜನರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಸಕರು ಮಾಹಿತಿ ನೀಡಿದರು.
ಮುಂಡುಗದೊರೆ ಗ್ರಾಮದಲ್ಲಿ 17ಜನರಿಗೆ ಸೋಂಕು. ಶ್ರೀರಂಗಪಟ್ಟಣ ತಾಲೂಕಿನ ಮುಂಡುಗದೊರೆ ಗ್ರಾಮ.ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಎರಡು ಗ್ರಾಮಗಳು ಸೀಲ್ ಡೌನ್ ಮಾಡಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್. ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಡ್ಯ: ಡಿಸಿ, ಎಸ್ಪಿ ಕಚೇರಿಗಳ ಸಮೀಪದಲ್ಲಿ ಗಾಂಜಾ ಗಿಡಗಳು ಪತ್ತೆ!