ಕನ್ನಡದ ನಿರ್ಮಾಪಕ, ಹೀರೋ ಸೇರಿ ನಿರ್ದೇಶಕನೂ ಕೊರೋನಾಗೆ ಬಲಿ‌

Team Newsnap
1 Min Read

ಕೊರೋನಾ ವೈರಸ್​ ನ ಎರಡನೇ ಅಲೆಗೆ ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಏಪ್ರಿಲ್​ ಹಾಗೂ ಮಂಜುನಾಥ್ ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೋವಿಡ್​ಗೆ ಇಂದು ಬಲಿಯಾಗಿದ್ದಾರೆ.

ಡಿ.ಎಸ್.‌ ಮಂಜುನಾಥ್.‌ ‘ಸಂಯುಕ್ತ-2’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ನಂತರ ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು. ಸದ್ಯ ‘೦% ಲವ್‌’ ಚಿತ್ರದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದರು.

‘ಸಂಯುಕ್ತ 2’ ಮತ್ತು ‘೦% ಲವ್‌’ ಎರಡೂ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಅಭಿರಾಮ್.‌ ಈಗ ಅಭಿರಾಮ್‌ ಕೂಡಾ ಮಂಜುನಾಥ್‌ ಅವರನ್ನು ಹಿಂಬಾಲಿಸಿದ್ದಾರೆ.

ಅಭಿರಾಮ್​ ಕಳೆದೊಂದು ವಾರದಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆದರೆ, ಪರೀಕ್ಷೆ ಮಾಡಿಸಿಕೊಳ್ಳದೆ ಮನೆಯಲ್ಲೇ ಇದ್ದರು.

ಇತ್ತೀಚೆಗೆ ಉಸಿರಾಟದ ತೊಂದರೆ ಅವರಲ್ಲಿ ಹೆಚ್ಚಾಗಿತ್ತು. ಈಗ ಅವರು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಹೀರೋ ಮತ್ತು ಡೈರೆಕ್ಟರ್‌ ಮೃತಪಟ್ಟಿದ್ದಾರೆ.

ಸೆಲೆಬ್ರಿಟಿಗಳಾದ ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

Share This Article
Leave a comment