ರಾಷ್ಟ್ರೀಯ

ಭಾರತ ರತ್ನ ಲತಾ ಮಂಗೇಶ್ಕರ್​​ಗೆ ಕೊರೊನಾ ದೃಢ; ಐಸಿಯುಗೆ ದಾಖಲು

ಗಾಯಕಿ, ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್​​ಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲತಾ ಮಂಗೇಶ್ಕರ್ (92) ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಸದ್ಯ ಅವರಿಗೆ ಕೊರೊನಾ ಇರೋದು ದೃಢವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಐಸಿಯುನಲ್ಲಿ ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡದ ಬೆಳ್ಳನೇ ಬೆಳಕಾಯ್ತು ಹಾಡು ಸೇರಿದಂತೆ ಸಾವಿರಾರು ಅವಿಸ್ಮರಣೀಯರ ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್​ ಅವರು ನೈಟಿಂಗೇಲ್ ಆಫ್ ಇಂಡಿಯಾ ಎಂದೇ ಖ್ಯಾತಿ ಪಡೆದಿದ್ದಾರೆ.

ಅಭಿಮಾನಿಗಳು ಬಳಗ ಲತಾ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024