October 17, 2021

Newsnap Kannada

The World at your finger tips!

ಐಪಿಎಲ್ 2 ನೇ ಆವೃತ್ತಿಗೂ ತಟ್ಟಿದ ಕೊರೊನಾ – ಬೌಲರ್ ನಟರಾಜನ್‍ ಗೆ ಪಾಸಿಟಿವ್: 6 ಮಂದಿ ಕ್ವಾರಂಟೈನ್

Spread the love

ಅರಬ್ ನಲ್ಲಿ ನಡೆಯುತ್ತಿರುವ ಐಪಿಎಲ್‍ಗೂ ಕೊರೊನಾ ಬಿಸಿ ತಟ್ಟಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಆಟಗಾರನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಹೈದರಾಬಾದ್ ತಂಡದ ವೇಗದ ಬೌಲರ್ ನಟರಾಜನ್ ಅವರಿಗೆ ಕೊರೊನಾ ಬಂದಿದೆ. ಇವರ ಸಂಪರ್ಕದಲ್ಲಿದ್ದ 6 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಇಂದು ಹೈದರಾಬಾದ್ ಮತ್ತು ಡೆಲ್ಲಿ ತಂಡದ ಮಧ್ಯೆ ಪಂದ್ಯ ನಿಗದಿಯಾಗಿದೆ. ಈ ಪಂದ್ಯ ನಿಗದಿಯಂತೆ ನಡೆಯಲಿದೆ.

ಕೊರೊನಾ ಬಂದ ಹಿನ್ನೆಲೆಯಲ್ಲಿ ಎಲ್ಲ ಆಟಗಾರರು ಮತ್ತು ಸಿಬ್ಬಂದಿಗೆ ಆರ್‍ಟಿ ಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಎಲ್ಲರ ವರದಿ ನೆಗೆಟಿವ್ ಬಂದಿದೆ. ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳಲ್ಲಿ, 6 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

error: Content is protected !!