ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ದೆಹಲಿ ಸರ್ಕಾರ ಮದುವೆ ಸಮಾರಂಭ ಹಾಗೂ ಅಂತ್ಯಕ್ರಿಯೆಗಳಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಕೆಲವು ನಿರ್ಬಂಧಗಳನ್ನು ಹಾಕಿದೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಶನಿವಾರ ಹೊಸ ಆದೇಶಗಳನ್ನು ಹೊರಡಿಸಿದೆ. ಮದುವೆ ಹಾಗೂ ಇತರ ಸಮಾರಂಭಗಳಲ್ಲಿ 200 ಪಾಲ್ಗೊಳ್ಳಬಹುದೆಂದು ಸೂಚಿಸಿದೆ.
ನಗರದ ತೆರೆದ ಸ್ಥಳಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ 100 ಮಂದಿ ಹಾಗೂ ಅಂತ್ಯಕ್ರಿಯೆಯಲ್ಲಿ ಕನಿಷ್ಠ 50 ಮಂದಿ ಭಾಗವಹಿಸಬೇಕೆಂದು ತಿಳಿಸಿದೆ.
ಈ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಮುಂತಾದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ.
ಈ ಹೊಸ ಆದೇಶ ಏಪ್ರಿಲ್ 30ರವರೆಗೂ ಜಾರಿಯಲ್ಲಿರಲಿದ್ದು, ಅಲ್ಲಿಯವರೆಗೂ 200ಕ್ಕೂ ಹೆಚ್ಚು ಮಂದಿ ಸಮಾರಂಭಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸೂಚಿಸಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ