June 7, 2023

Newsnap Kannada

The World at your finger tips!

ganesh

ಕೊರೊನಾ ಭೀತಿ : ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿ- ಸರ್ಕಾರ ಚಿಂತನೆ

Spread the love

ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳದ ಹಿನ್ನೆಲೆಯಲ್ಲಿ ಗಣೇಶ ಹಬ್ಬಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತಿಸಿದೆ.

ಕರ್ನಾಟಕ ಸೇರಿ ದೇಶಾದ್ಯಂತ ಮತ್ತೆ ಕೊರೊನಾ ಸೋಂಕಿತರ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿಗೆ ತರಲು ಆಲೋಚಿಸಿದೆ.

ಜನಜಂಗುಳಿ ಸೇರದಂತೆ ಗಣೇಶ ಹಬ್ಬಕ್ಕೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಕರ್ನಾಟಕಕ್ಕೆ ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿಯೂ ಗಣೇಶ ಹಬ್ಬಕ್ಕೆ ಹಲವು ನಿರ್ಬಂಧಗಳನ್ನು ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

error: Content is protected !!