ರಾಹುಲ್ ದ್ರಾವಿಡ್‍ಗೆ ಕೊರೊನಾ- ಏಷ್ಯಾ ಕಪ್ ಟೂರ್ನಿಯಿಂದ ಔಟ್

Team Newsnap
1 Min Read

ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್‍ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಏಷ್ಯಾಕಪ್ ಟೂರ್ನಿಯಿಂದ ಹೊರೆಗುಳಿಯಲಿದ್ದಾರೆ

ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಈ ವಿಷಯ ತಿಳಿಸಿ , ಏಷ್ಯಾಕಪ್‍ಗೆ ದಿನಗಣನೆ ಆರಂಭವಾಗಿದೆ. ಆ. 28ರಂದು ನಡೆಯುವ ಭಾರತ, ಪಾಕಿಸ್ತಾನ ಹೈವೋಲ್ಟೇಜ್ ಕದನಕ್ಕೂ ಮೊದಲು ಟೀಂ ಇಂಡಿಯಾಕ್ಕೆ ಮೊದಲ ಆಘಾತವಾಗಿದೆ.

2022ರ ಏಷ್ಯಾ ಕಪ್‍ಗಾಗಿ ಯುಎಇಗೆ ತೆರಳುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ತಂಡದ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಕೋಚ್ ದ್ರಾವಿಡ್‍ಗೆ ಕೊರೊನಾ ಪಾಸಿಟಿವ್ ಬಂದಿದೆ. ಇದನ್ನು ಓದಿ – ಆ. 26 ರ ಮಡಿಕೇರಿ ಚಲೋ ಮುಂದೂಡಿಕೆ – ಸಿದ್ದರಾಮಯ್ಯ

ದ್ರಾವಿಡ್‍ಗೆ ಸೋಂಕಿನ ರೋಗ ಲಕ್ಷಣವು ಸೌಮ್ಯ ರೋಗಲಕ್ಷಣಗಳಿದೆ. ಈ ಹಿನ್ನೆಲೆಯಲ್ಲಿ ಆ.27ರಿಂದ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ, ಕೊರೊನಾ ನೆಗೆಟಿವ್ ಬಂದ ನಂತರದಲ್ಲಿ ಮತ್ತೆ ತಂಡಕ್ಕೆ ಸೇರುವ ಸಾಧ್ಯತೆಯಿದೆ ಎಂದು ಬಿಸಿಸಿಐ ತಿಳಿಸಿದೆ.

cricket

ಜಿಂಬಾಬ್ವೆ ವಿರುದ್ಧ ಸೋಮವಾರ ಕೊನೆಗೊಂಡ ಏಕದಿನ ಕ್ರಿಕೆಟ್ ಸರಣಿಗೂ ತಂಡದ ಜತೆ ದ್ರಾವಿಡ್ ಇರಲಿಲ್ಲ. ಸತತ ಪಂದ್ಯಗಳ ಕಾರಣ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹಾಗೂ ಇತರ ಕೋಚಿಂಗ್ ಸಿಬ್ಬಂದಿಗೆ ಬಿಸಿಸಿಐ ವಿಶ್ರಾಂತಿ ನೀಡಿತ್ತು.

ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ವೇಗಿ ಜಸ್‍ಪ್ರೀತ್ ಬೂಮ್ರಾ ಅವರು ಬೆನ್ನು ನೋವಿನ ಕಾರಣದಿಂದ ತಂಡದಿಂದ ಹೊರಗುಳಿದಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಗಾಯದಿಂದ ಚೇತರಿಸಿಕೊಂಡಿರುವ ಕೆ.ಎಲ್.ರಾಹುಲ್ ಅವರು ತಂಡಕ್ಕೆ ಮರಳಿದ್ದಾರೆ.

Share This Article
Leave a comment