December 28, 2024

Newsnap Kannada

The World at your finger tips!

sdm collage

ಧಾರವಾಡ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ- ಹಾಸ್ಟೆಲ್‌ ಸೀಲ್‌ಡೌನ್

Spread the love

ಧಾರವಾಡದ ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಸ್ವ್ಯಾಬ್ ಸಂಗ್ರಹಿಸಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ.

ಕಾಲೇಜಿನ ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರು ಕೋವಿಡ್‌ ಲಸಿಕೆಯ ಎರಡು ಡೋಸ್ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡು ಬಂದಿಲ್ಲ.

ಔಷಧೋಪಚಾರ, ಚಿಕಿತ್ಸೆ ನಡೆಯುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದರು.

ಸತ್ತೂರಿನ ಎಸ್‌ಡಿಎಂ ವೈದ್ಯಕೀಯ ಕಾಲೇಜು ಆವರಣಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ, ವಿದ್ಯಾರ್ಥಿನಿಲಯ ಸೀಲ್‌ಡೌನ್ ಪ್ರದೇಶ ಪರಿಶೀಲಿಸಿದರು.

ನಂತರ ಸಂಸ್ಥೆಯ ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಿ, ನ.17ರಂದು ಕಾಲೇಜಿನ ಆವರಣದ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಹಲವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

Copyright © All rights reserved Newsnap | Newsever by AF themes.
error: Content is protected !!