ಮೈಸೂರಲ್ಲಿ ಭಯ ಹುಟ್ಟಿಸಿರುವ ಕೊರೊನಾದಿಂದ ಒಂದೇ ದಿನ 52 ಮಕ್ಕಳಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬಂದಿಲ್ಲ. ಈ ಆತಂಕದ ಮಧ್ಯೆ ಮತ್ತೊಂದು ಆಘಾತಕಾರಿ ಸುದ್ದಿ ನಿನ್ನೆಯಿಂದ ಹೊರ ಬಿದ್ದಿದೆ.
ನಿನ್ನೆ ಒಂದೇ ದಿನ 52 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ, ಇದುವರೆಗೂ ಮೈಸೂರು ಜಿಲ್ಲೆಯಲ್ಲಿ ಒಟ್ಟು 530 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ. 530 ಮಕ್ಕಳಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ, ಮೃತರೆಲ್ಲಾ 7 ರಿಂದ 8 ವರ್ಷದೊಳಗಿನವರಾಗಿದ್ದಾರೆ.
ಮೈಸೂರಿನಲ್ಲಿ ನಿನ್ನೆ ಒಂದೇ ದಿನ 52 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿರೋದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಜಿಲ್ಲಾಡಳಿತಕ್ಕೆ ಸವಾಲ್ ಆಗಿ ಪರಿಣಮಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ 1,62,629 ಮಂದಿಯನ್ನ ಕೊರೊನಾ ಸೋಂಕು ಕಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ