ಮೈಸೂರಿನಲ್ಲಿ ಕೊರೋನಾ ನಿಯಂತ್ರಣ : ಡಿಸಿ ರೋಹಿಣಿ ಸಿಂಧೂರಿ

Team Newsnap
1 Min Read
Rohini Sindhuri's husband Sudhir grab land in Yalahanka? Complaint via tweet to DGP ರೋಹಿಣಿ ಸಿಂಧೂರಿ ಪತಿ ಸುಧೀರ್ ಯಲಹಂಕದಲ್ಲಿ ಭೂ ಕಬಳಿಕೆ ? ಡಿಜಿಪಿಗೆ ಟ್ವೀಟ್ ಮೂಲಕ ದೂರು

ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಿತ್ತು. ಆದರೆ ಈಗ ನಾವು ಈ ವಿಚಾರದ ಬಗ್ಗೆ ಗಮನ ಹರಿಸಿದ್ದೇವೆ. ತಾಲ್ಲೂಕು ಕೇಂದ್ರದಲ್ಲಿ ಹೆಚ್ಚಿನ ವ್ಯವಸ್ಥೆ ಕಲ್ಪಿಸಿದ್ದೇವೆ. ಹೆಚ್ಚು ಹೆಚ್ಚು ಟೆಸ್ಟ್ ಹಾಗೂ ಆಕ್ಸಿಜನ್ ಮತ್ತು ಬೆಡ್ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಹಾಕಿಕೋಳ್ಳಬೇಕು.ಆಗಷ್ಟೇ ನಾವು ಕೊರೋನಾವನ್ನು ನಿಯಂತ್ರಣ ಮಾಡಲು ಸಾಧ್ಯ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಪ್ರವಾಸಿತಾಣಗಳನ್ನು, ಜಿಲ್ಲಾ ಗಡಿಗಳನ್ನು ಬಂದ್ ಮಾಡಲು ಸಾಧ್ಯವಿಲ್ಲ. ಇದರಿಂದ ಯಾವುದೇ ಪ್ರಯೋಜನ ಕೂಡ ಆಗುವುದಿಲ್ಲ. ಈ ಕಾರಣಕ್ಕಾಗಿಯೇ  ಅರಮನೆಯಲ್ಲಿ ಕೊರೊನಾ ಟೆಸ್ಟ್ ಮಾಡುತ್ತಿದ್ದೇವೆ. ನಮ್ಮ ಕಾರ್ಯಕ್ಕೆ ಜನರು ಸಹಕಾರ ನೀಡಬೇಕು. ಇದು ಕೆಲವರಿಗೆ ಸಮಸ್ಯೆ ಎನ್ನಿಸಿದ್ರೂ ಅನಿವಾರ್ಯದಿಂದ ಈ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.

Share This Article
Leave a comment