ಬಿಜೆಪಿ ಸಂಸದ ಅಶೋಕ್ ಗಸ್ತಿ(೫೫) ಗುರುವಾರ ರಾತ್ರಿ ೧೦. ೩೧ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ ಸೆ ೨ ರಿಂದ ಕೊರೋನಾದಿಂದ ಬಳಲುತ್ತಿದ್ದ ಗಸ್ತಿ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಮಾಜಿ ಪ್ರಧಾನಿ ದೇವೆಗೌಡ, ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರೊಂದಿಗೆ ಸಂಸತ್ತನ್ನು ಪ್ರವೇಶ ಮಾಡಿದ್ದ ಅಶೋಕ್ ರಾಯಚೂರು ಮೂಲದವರು. ಇತ್ತೀಚಿಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
ಹಲವು ಅಂಗವೈಫಲ್ಯಗಳಿಂದ ಬಳಲುತ್ತಿದ್ದ ಗಸ್ತಿ ಅವರಿಗೆ ಮಣಿಪಾಲ್ ಆಸ್ಪತ್ರೆ ಯ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ