ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 8,449 ಕೊರೋನಾ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ 6,812 ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದ ಪಾಸಿಟಿವಿಟಿ ರೇಟ್ ಶೇ. 4.15ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ ನಾಲ್ಕು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 62, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 74, ಬೆಂಗಳೂರು ನಗರ 6,812, ಬೀದರ್ 20, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 24, ಚಿತ್ರದುರ್ಗ 14, ದಕ್ಷಿಣ ಕನ್ನಡ 211, ದಾವಣಗೆರೆ 18, ಧಾರವಾಡ 66, ಗದಗ 10, ಹಾಸನ 89, ಹಾವೇರಿ 0, ಕಲಬುರಗಿ 43, ಕೊಡಗು 29, ಕೋಲಾರ 98, ಕೊಪ್ಪಳ 5, ಮಂಡ್ಯ 129, ಮೈಸೂರು 219, ರಾಯಚೂರು 2, ರಾಮನಗರ 20, ಶಿವಮೊಗ್ಗ 43, ತುಮಕೂರು 96, ಉಡುಪಿ 148, ಉತ್ತರ ಕನ್ನಡ 36, ವಿಜಯಪುರ 36 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು