ದೇಶದಲ್ಲಿ ನಿನ್ನೆ ಒಂದೇ ದಿನ 2 ಲಕ್ಷ ಗಡಿ ದಾಟಿದ ಕೊರೋನಾ ಪಾಸಿಟಿವ್ ಕೇಸ್ ದೃಢವಾಗಿದೆ. ದೇಶದಲ್ಲಿ 1,038 ಮಂದಿ ಸಾವನ್ನಪ್ಪಿದ್ದಾರೆ.
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,00,739 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಇನ್ನು 93,528 ಮಂದಿ ನಿನ್ನೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,038 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದ್ದರೆ, 1,24,29,564 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಸದ್ಯ 14,71,877 ಸಕ್ರಿಯ ಪ್ರಕರಣಗಳಿವೆ.. 1,73,123 ಮಂದಿ ಈವರೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ದೇಶದಾದ್ಯಂತ ಈವರೆಗೆ ಒಟ್ಟು 11,44,93,238 ಜನರಿಗೆ ವ್ಯಾಕ್ಸಿನೇಷನ್ ನಡೆದಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ