ಮಂಡ್ಯದ ಶ್ರೀರಂಗಟ್ಟಣದಲ್ಲಿ ಕೊರೊನ ಸ್ಫೋಟಗೊಂಡಿದೆ.
ತಮಿಳುನಾಡು ಪ್ರವಾಸ ಕೈಗೊಂಡಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಶ್ರೀರಂಗಪಟ್ಟಣ ತಾಲೂಕಿನ ಹಳ್ಳಿಗಳಿಂದ ಜನ ದೇವಾಲಯಕ್ಕೆ ತೆರಳಿದ್ದರು ಕಳೆದ ವಾರ 6 ಬಸ್‍ಗಳಲ್ಲಿ ದೇವಾಲಯಕ್ಕೆ ತೆರಳಿದ್ದರು.
ಈವರೆಗೆ ವಾಪಾಸ್ಸಾದ 4 ಬಸ್‍ನಲ್ಲಿದ್ದ ಭಕ್ತರಲ್ಲಿ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇಂದು ಅಥವಾ ನಾಳೆ ಮತ್ತೆರಡು ಬಸ್ ಶ್ರೀರಂಗಪಟ್ಟಣಕ್ಕೆ ವಾಪಾಸ್ಸಾಗಿರುವ ಸಾಧ್ಯತೆ ಇದೆ. ಆರೋಗ್ಯ ಸಿಬ್ಬಂದಿ ತಮಿಳುನಾಡಿನಿಂದ ವಾಪಸ್ಸಾದವರ ಟೆಸ್ಟ್ ಮಾಡುತ್ತಿದ್ದಾರೆ.
ಪಾಸಿಟಿವ್ ಬಂದವರು ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೂ ಪರೀಕ್ಷೆ ನಡೆಸಲಾಗುತ್ತಿದೆ. ಕೊರೊನಾ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಆತಂಕ ಮನೆ ಮಾಡಿದೆ.
More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು