ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಿಎಂ ಕೇಜ್ರಿವಾಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ಈ ವಿಷಯ ತಿಳಿಸಿದ್ದಾರೆ.
ನಾನು ಕೊರೊನಾ ಟೆಸ್ಟ್ ಗೆ ಒಳಗಾಗಿದ್ದೆ. ಅಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಸೋಂಕಿನ ಗುಣಲಕ್ಷಣಗಳು ಕಡಿಮೆ ಇದೆ , ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೇನೆ.
ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಯಾರ್ಯಾರು ಭೇಟಿ ಮಾಡಿದ್ದಿರೋ ಅವರೆಲ್ಲರೂ ದಯವಿಟ್ಟು ಟೆಸ್ಟ್ ಮಾಡಿಸಿಕೊಳ್ಳಿ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಳ್ಳಬೇಕು ಎಂದು ಪೋಸ್ಟ್ ಮಾಡಿದ್ದಾರೆ.
ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದೆ ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್‍ಗಳು ಸೋಮವಾರ ಪತ್ತೆಯಾಗಿದೆ.
ದೆಹಲಿಯ ಪಾಸಿಟಿವ್ ರೆಟ್ ಶೇ.6.46ಕ್ಕೆ ಏರಿದೆ. 6,288 ಕೊರೊನಾ ಸೋಂಕಿತರು ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರು ಹೋಂ ಐಸೋಲೇಶನ್‍ಲ್ಲಿ ಇದ್ದಾರೆ. ದೆಹಲಿಯಲ್ಲಿ ನಿನ್ನೆ ದಾಖಲೆ ಮಟ್ಟದಲ್ಲಿ ಕೊರೊನಾ ಸಾವಿನ ಸಂಖ್ಯೆ ಏರಿಕೆಯಾಗಿತ್ತು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ