February 20, 2026

Newsnap Kannada

The World at your finger tips!

election , politics , kolar

Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

10 ದಿನ ವಿದೇಶ ಪ್ರವಾಸಕ್ಕೆ ಹೋಗಿದ್ದ ಆರೋಗ್ಯ ಸಚಿವ ಡಾ ಸುಧಾಕರ್‌ಗೆ ಕೊರೊನಾ ಪಾಸಿಟಿವ್

Spread the love

ರಾಜ್ಯದ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ ಎಂದಿದ್ದಾರೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್‍ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ – ಸಂಸದೆ ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ – ಸಚಿವನಾರಾಯಣಗೌಡ

10 ದಿನ ವಿದೇಶಿ ಪ್ರವಾಸ :

ಕೆಲ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಭೀತಿ ಇದ್ದು, ಇನ್ನೂ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಕೇಸ್ ಹೆಚ್ಚಿದೆ. ಸುಧಾಕರ್ ಕುಟುಂಬದ ಜೊತೆ ವಿದೇಶ ಪ್ರವಾಸ ಮುಗಿಸಿ ವಾಪಸ್ ಆಗಿದ್ದರು. 10ಕ್ಕೂ ಹೆಚ್ಚು ದಿನಗಳ ಕಾಲ ವಿದೇಶಿ ಪ್ರವಾಸದಲ್ಲಿದ್ದ ಸಚಿವರಿಗೆ ವಿದೇಶದಿಂದಲೇ ಸೋಂಕು ಹಬ್ಬಿರುವ ಅನುಮಾನವಿದೆ.

error: Content is protected !!