ಸಂಸತ್ತಿನ 400 ಸಿಬ್ಬಂದಿಗೆ ಕೊರೊನಾ ಪಾಸಿಟಿವ್​

Team Newsnap
0 Min Read

ಕೇಂದ್ರ ಬಜೆಟ್‌ಗೆ ಕೆಲವೇ ವಾರಗಳು ಬಾಕಿ ಇರುವಾಗಲೇ ನಾಲ್ಕೈದು ದಿನಗಳಲ್ಲಿ ಸಂಸತ್ತಿನ 400 ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ

ರಾಜ್ಯಸಭೆಯು ಭಾನುವಾರ ನೌಕರರ ಹಾಜರಾತಿ ಕುರಿತು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರು ಪರಿಸ್ಥಿತಿಯನ್ನು ಅವಲೋಕಿಸಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವಾಲಯದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸೂಚಿಸಿದ್ದಾರೆ.

ಸಂಸತ್ತಿನ ಎಲ್ಲಾ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಾಯ್ಡು ನಿರ್ದೇಶನ ನೀಡಿದ್ದಾರೆ.

ಸೋಂಕಿತರ ಚೇತರಿಕೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ತಿಳಿಸಿದ್ದಾರೆ.

Share This Article
Leave a comment