ರಾಜ್ಯದಲ್ಲಿ ಮತ್ತೆ ಕೊರೊನಾ ಹೊಸ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.
ಕೋವಿಡ್ ತಾಂತ್ರಿಕ ಸಮಿತಿ ಸಲಹೆ ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮದುವೆ, ಸಭೆ ಹಾಗೂ ಸಮಾರಂಭಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ರಾಜ್ಯದಲ್ಲಿ ಮದುವೆ ಸಮಾರಂಭಗಳಿಗೆ 50 ಜನರಿಗಷ್ಟೇ ಅವಕಾಶ ನೀಡುವ ಸಾಧ್ಯತೆಯಿದೆ. ಈ ಕುರಿತು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಸಾಧ್ಯತೆಯಿದೆ.
ಬ್ರಿಟನ್, ಬ್ರಿಜಿಲ್, ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ವೈರಸ್ ಸೋಂಕಿನ ಜೊತೆಗೆ ಆಂಧ್ರಪ್ರದೇಶದಲ್ಲಿಯೂ ಹೊಸ ಮಾದರಿಯ ಕೊರೊನಾ ವೈರಸ್ ಪತ್ತೆಯಾಗಿದೆ.
ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಕೋವಿಡ್ ತಾಂತ್ರಿಕ ಸಮಿತಿ ಸೂಚಿಸಿದೆ. ಜನರು ಗುಂಪು ಸೇರುವುದನ್ನು ತಪ್ಪಿಸುವಂತೆ ಸಲಹೆ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು