32 ಕರೋನಾ ವಾರಿಯರ್ಸ್ ಗಳಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

Team Newsnap
1 Min Read

ನ್ಯೂಸ್ ಸ್ನ್ಯಾಪ್.
ಬೆಂಗಳೂರು.

ಕೋವಿಡ್ ಹಿನ್ನೆಲೆಯಲ್ಲಿ ಕೆಂಪೇಗೌಡ ಜಯಂತಿಯನ್ನು ಸರಳವಾಗಿ ಆಚರಿಸಿದ ಸರ್ಕಾರ, ಈ ವೇಳೆ 32 ಜನ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿಯನ್ನು ವಿತರಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಮಾತನಾಡಿ ‘ಪ್ರಶಸ್ತಿಗೆ ಆಯ್ಕೆಯಾದ ಪುರಸ್ಕೃತರ ಬಗ್ಗೆ ಅಪಸ್ವರ ಅಥವಾ ಅವಹೇಳನ ಸರಿಯಲ್ಲ’ ಎಂದು‌ ಹೇಳಿದರು.

ಈ ವರ್ಷ ಕರೋನಾ ವಾರಿಯರ್ಸ್ ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇಂಥವರನ್ನು ಗುರುತಿಸಿ‌ ಗೌರವಿಸಬೇಕಾದ್ದು ನಮ್ಮ ಆದ್ಯ ಕರ್ತವ್ಯ. ಹಾಗಾಗಿ ಈ ವರ್ಷ ಕೋವಿಡ್ ವಿರುದ್ಧ ಹೋರಾಡಿದ ಅನೇಕ ಮುಖ್ಯ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಹೀಗಾಗಿ ಆಯ್ಕೆಯ ಬಗ್ಗೆ ಅಪಸ್ವರ ಬೇಡ ಎಂದರು.

ಕಾರ್ಯಕ್ರಮದಲ್ಲಿ ಮೇಯರ್‌ ಗೌತಮ್‌ ಕುಮಾರ್‌, ಆಯುಕ್ತ ಮಂಜುನಾಥ್‌ ಪ್ರಸಾದ್‌, ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಉಪ ಮುಖ್ಯಮಂತ್ರಿಗಳು, ನಾಡಪ್ರಭು ಕೆಂಪೇಗೌಡರ ದಿನಾಚರಣೆ ಪ್ರಯುಕ್ತ ‘ಮೇಖ್ರಿ ಸರ್ಕಲ್ʼನಲ್ಲಿರುವ ಕೆಂಪೇಗೌಡ ಗಡಿ ಗೋಪುರದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ‌ದರು.
ಈ ಕಾರ್ಯಕ್ರಮದಲ್ಲಿ ಚಿತ್ರನಟ ಪುನೀತ್‌ ರಾಜಕುಮಾರ್‌, ಮಲ್ಲೇಶ್ವರ ವಿಭಾಗದ ಪಾಲಿಕೆ ಸದಸ್ಯರು, ಅಧಿಕಾರಿಗಳು ಭಾಗಿಯಾಗಿದ್ದರು.

Share This Article
Leave a comment