December 23, 2024

Newsnap Kannada

The World at your finger tips!

karona

ಕೊಡಗಿನ ಖಾಸಗಿ ಶಾಲೆಯ 9 ಮಕ್ಕಳಿಗೆ ಕೊರೊನಾ ಸೋಂಕು

Spread the love

ಕೊಡಗು ಜಿಲ್ಲೆಯಲ್ಲಿ ಮತ್ತೆ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದೆ.

ಮಡಿಕೇರಿ ಶಾಲೆಯೊಂದರ 8 ಮತ್ತು 9ನೇ ತರಗತಿಯ ಒಟ್ಟು 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿತ ಮಕ್ಕಳ ಪ್ರಾಥಮಿಕ ಸಂಪರ್ಕಿತರಿಗೆ ಕೋವಿಡ್‌ ಪರೀಕ್ಷೆ ಮಾಡಿ ಶಾಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಮೊದಲು ಕೊಡಗು ವಿದ್ಯಾಲಯ ಶಾಲಾ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.

ಬಳಿಕ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ 9 ಮಕ್ಕಳಿಗೆ ಪಾಸಿಟಿವ್ ಬಂದಿದೆ.

ಪಾಸಿಟಿವ್ ಬಂದ‌ ಮಕ್ಕಳಲ್ಲಿ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಸೋಂಕಿತರೆಲ್ಲರೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳು. ಮಕ್ಕಳಿಗೆ ಅವರ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಮಕ್ಕಳ ಪ್ರಾಥಮಿಕ ಸಂಪರ್ಕಿತರಿಗೂ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ ಎಂದು ಕೊಡಗು ಡಿಎಚ್‌ಒ ಡಾ. ವೆಂಕಟೇಶ್‌ ಮಾಹಿತಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!