ದೊಮ್ಮಸಂದ್ರದ ಖಾಸಗಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಶಾಲೆಯ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಡವಾಗಿದೆ
ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಪೋಷಕರು ಆತಂಕಕ್ಕೊಳಗಾಗಿದ್ದಾರೆ.
ಮಹಾದೇವಪುರದಿಂದ ಶಾಲೆಗೆ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಮೊದಲು ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತ್ತು.
ಅವರನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿತ್ತು. ನಂತರ ಶಾಲೆಯ 497 ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ 33 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ.
8 ನೇ ತರಗತಿಯಲ್ಲಿ 1 ವಿದ್ಯಾರ್ಥಿಗೆ, 9 ನೇ ತರಗತಿಯ 12 ವಿದ್ಯಾರ್ಥಿಗಳಿಗೆ, 10 ನೇ ತರಗತಿಯ 8 ವಿದ್ಯಾರ್ಥಿಗಳಿಗೆ, 11 ನೇ ತರಗತಿಯಲ್ಲಿ 3 ವಿದ್ಯಾರ್ಥಿಗಳಿಗೆ ಹಾಗೂ 12ನೇ ತರಗತಿಯಲ್ಲಿ 9 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಎಲ್ಲಾ ವಿದ್ಯಾರ್ಥಿಗಳನ್ನು ದೊಮ್ಮಸಂದ್ರದ ಶಾಲೆಯಲ್ಲಿಯೇ ಐಸೋಲೇಟ್ ಮಾಡಲಾಗಿದೆ.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ