February 23, 2026

Newsnap Kannada

The World at your finger tips!

danish

ಎರಡನೇ ಡೋಸ್ ಪಡೆದಿದ್ದರೂ ಸಂಸದ ಡ್ಯಾನೀಶ್ ಅಲಿಗೆ ಕೊರೋನಾ ಸೋಂಕು ದೃಢ

Spread the love

ದೆಹಲಿಯಲ್ಲಿ ನಡೆದಿರುವ ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಬಿಎಸ್‍ಪಿ ಸಂಸದ ಡ್ಯಾನಿಶ್ ಅಲಿಗೆ ಕೊರೊನಾ ಪಾಸಿಟೀವ್ ಬಂದಿದೆ

ಡ್ಯಾನಿಶ್ ಅಲಿ ಸೋಮವಾರ ಸಂಸತ್ತಿನ ಕಲಾಪದಲ್ಲಿ ಭಾಗಿಯಾಗಿದ್ದರು.

ಮಂಗಳವಾರ ಟ್ವೀಟ್‌ ಮೂಲಕ ಮಾಹಿತಿ ತಿಳಿಸಿದ್ದಾರೆ. ಡಿಸೆಂಬರ್ 23ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಅಂತ್ಯವಾಗುತ್ತಿದೆ. ಕಲಾಪಕ್ಕೆ ಹಾಜರಾಗಿದ್ದ ಸಂಸದರಿಗೆ  ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.

ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ ಹೊರತಾಗಿ ಸೋಂಕು ದೃಢಪಟ್ಟಿದೆ.  ಸೋಮವಾರ ಕಲಾಪದಲ್ಲಿ ಭಾಗಿಯಾಗಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕ್ವಾರಂಟೈನ್‍ಗೆ ಒಳಗಾಗಿ ಮತ್ತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅಲಿ ಟ್ವೀಟ್ ಮಾಡಿದ್ದಾರೆ.

error: Content is protected !!