ಬೆಂಗಳೂರಲ್ಲಿ ಬುಧವಾರ 4991 ಮಂದಿಗೆ ಕೊರೋನಾ ಸೋಂಕು ದೃಡವಾಗಿದೆ. ರಾಜ್ಯದಲ್ಲಿ 35 ಮಂದಿ ಸಾವು ಸಂಭವಿಸಿದೆ.
ರಾಜ್ಯದಲ್ಲಿ ಬುಧವಾರ 8433 ರೆಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 116957 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 125390 ಕೊರೊನಾ ಟೆಸ್ಟ್ಗಳನ್ನು ನಡೆಸಲಾಗಿದೆ.
ಈ ಪೈಕಿ ಇಂದು 6976 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಸೋಂಕಿಗೊಳಗಾದವರ 10,33, 560ಕ್ಕೆ ಏರಿಕೆಯಾಗಿದೆ.
ಬುಧವಾರ 2794 ಸೋಂಕಿತರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9,71556ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದಾಗಿ 35 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 12,731 ಮಂದಿ ಸೋಂಕಿನಿಂದ ಸಾವನ್ನಪ್ಪಿದಂತಾಗಿದೆ.
ಸದ್ಯ ರಾಜ್ಯದಲ್ಲಿ 49,254 ಪಾಸಿಟಿವ್ ಕೇಸ್ಗಳಿವೆ. ಈ ಪೈಕಿ 353 ಸೋಂಕಿತರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್ನಲ್ಲಿ ತಿಳಿಸಿದೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ