ರೂಪಾಂತರ ಕೊರೋನಾ ವೈರಸ್ ಹೆಚ್ಚಿದ ಆತಂಕ – ರಾತ್ರಿ ಕರ್ಫ್ಯೂಗೆ ಚಿಂತನೆ; ಸಚಿವ ಸುಧಾಕರ್

Team Newsnap
1 Min Read
sudhakar picture

ಕೊರೊನಾ ಹೊಸ ರೂಪಾಂತರ ಪಡೆದಿದೆ. ಈ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಹಾಗೂ ಮುಂಜಾಗ್ರತಾ ಕ್ರಮದಿಂದಾಗಿ ರಾತ್ರಿ ಕರ್ಫ್ಯೂ ವಿಧಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಸುಧಾಕರ್ ಮುನ್ಸೂಚನೆ ನೀಡಿದರು.

ಹೊಸ ರೂಪಾಂತರ ಪಡೆದು ಕೊಂಡಿರುವ ಕೊರೋನಾ ಈಗಾಗಲೇ ಭಾರತಕ್ಕೂ ಕಾಲಿಟ್ಟಿದೆ. ತಮಿಳುನಾಡಿನ ಚೆನ್ನೈನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ಈ ಹೊಸ ಸ್ವರೂಪದ ಕೊರೋನಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಅನೇಕ ರಾಜ್ಯಗಳು ಈಗಾಗಲೇ ರಾತ್ರಿ ಕರ್ಫ್ಯೂ ಜಾರಿ ಮಾಡಿವೆ. ಕರ್ನಾಟಕದಲ್ಲಿಯೂ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದರು.

ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಸಂಜೆ ವೇಳೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜನವರಿ 1ರಿಂದ ಶಾಲೆಗಳನ್ನು ಆರಂಭಿಸಬೇಕು ಎನ್ನುವಷ್ಟರಲ್ಲಿ ಈ ಹೊಸ ಸ್ವರೂಪದ ಕೊರೋನಾ ಪ್ರವೇಶವಾಗಿದೆ. ಹೀಗಾಗಿ ಶಾಲೆಗಳನ್ನು ಆರಂಭಿಸಬೇಕೋ ಬೇಡವೋ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಅಲ್ಲದೆ
ತಾಂತ್ರಿಕ ಸಲಹಾ ಸಮಿತಿಯ ವರದಿ ಕೇಳಿದ್ದೇವೆ. ಅವರು ಇಂದೇ ವರದಿ ನೀಡಲಿದ್ದು, ವರದಿ ಬಂದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪನವರ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ರಾಜ್ಯ ದಲ್ಲಿ ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ಚಿಂತನೆ ಇಲ್ಲ. ಈಗಾಗಲೇ ಕೊರೋನಾ ನೆಗೆಟಿವ್ ವರದಿ ಇಲ್ಲದೆ ಬಂದಿರುವ 138 ಮಂದಿಯನ್ನು ಪತ್ತೆ ಹಚ್ಚುವ ಕೆಲಸ ಆಗಿದೆ. ಅವರನ್ನು ಕ್ವಾರಂಟೈನ್ ಮಾಡಿದ್ದಾರೆ. ಈಗಾಗಲೇ ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿರುವವರ ರಿಪೋರ್ಟ್ ಇಂದು ಸಂಜೆ ಬರಬಹುದು. ವರದಿಯಲ್ಲಿ ಪಾಸಿಟಿವ್ ಬಂದರೆ ಜೆನೆಸಿಸ್ ಪರೀಕ್ಷೆ ಮಾಡಿ, ಆ ವೈರಸ್ ಬಗ್ಗೆ ತಿಳಿದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

Share This Article
Leave a comment