ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯೆಯೂ ಆಗಿರುವ 6 ತಿಂಗಳ ಗರ್ಭಿಣಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆ ಕೇರಳದ ತಲಶೇರಿ ಮೂಲದ ಡಾ.ಮಾಹಾ ಬಷೀರಾ ಕೊರೊನಾಗೆ ಬಲಿಯಾದವರು.
ಕಳೆದ 8 ತಿಂಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿನ ವೈದ್ಯ ಡಾ.ಶವಾಫೆರ್ ಮಹಮ್ಮದ್ ಅವರನ್ನು ವಿವಾಹವಾಗಿದ್ದ ಡಾ. ಮಹಾಬಷೀರಾ 6 ತಿಂಗಳ ಗರ್ಭಿಣಿಯಾಗಿದ್ದರು ಎಂದು ಕುಟುಂಬದ ಮೂಲಗಳು ಹೇಳಿವೆ.
ಕಳೆದ ಕೆಲ ದಿನಗಳ ಹಿಂದೆ ದಂಪತಿ ಇಬ್ಬರಿಗೂ ಕೊರೊನಾ ಪಾಸಿಟಿವ್ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮಹಾಬಷೀರಾಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ