ಬೆಂಗಳೂರು: ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪದ ಸಂಬಂಧ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ, ಸಿಬಿಐ (CBI) ಮತ್ತು ಇಡಿ (ED)ಗೆ ದೂರು ನೀಡಲಾಗಿದೆ. ಈ ದೂರನ್ನು ಶಾಸಕ ಮುನಿರತ್ನ ಸಲ್ಲಿಸಿದ್ದು, ಡಿಕೆ ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2,000 ಕೋಟಿ ರೂ. ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಭ್ರಷ್ಟಾಚಾರ ಕುರಿತು ಆರೋಪ:
ಬೆಂಗಳೂರು ನಗರದ ಅಭಿವೃದ್ಧಿಗೆ 2,000 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.
ಇದರಲ್ಲಿ 1,700 ಕೋಟಿ ರೂ. ವಿಶ್ವಬ್ಯಾಂಕ್‌ನಿಂದ ಸಾಲದ ರೂಪದಲ್ಲಿ ಪಡೆದುಕೊಳ್ಳಲಾಗಿದೆ.
ಸಾರ್ವಜನಿಕರ ತೆರಿಗೆಯಿಂದ 300 ಕೋಟಿ ರೂ. ಕೂಡ ಸೇರಿದ್ದು, ಈ ಸಂಪೂರ್ಣ ಅನುದಾನದ ದುರುಪಯೋಗ ನಡೆದಿದೆ ಎಂಬ ಆರೋಪವಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೂ ತರುವ ಕೆಲಸ ಈಗಾಗಲೇ ನಡೆದಿದೆ.
ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಶಾಸಕರಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪವಿದೆ. ಅವರ ಕ್ಷೇತ್ರದಲ್ಲಿ ಕೇವಲ 5 ವಾರ್ಡುಗಳಿದ್ದರೂ 232 ಕೋಟಿ ರೂ. ಅನುದಾನ ನೀಡಲಾಗಿದೆ.
ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ ಕಾಂಗ್ರೆಸ್‌ನ ಸ್ಟಾರ್ ಚಂದ್ರು ಮಾಲೀಕತ್ವದ ‘ಸ್ಟಾರ್ ಬಿಲ್ಡರ್ಸ್’ ಕಂಪನಿಗೆ ಯಶವಂತಪುರ ಕ್ಷೇತ್ರದ ಅನುದಾನದ ಭಾಗ ನೀಡಲು ತೀರ್ಮಾನಿಸಲಾಗಿದೆ.
ಈ ಎಲ್ಲಾ ಆರೋಪಗಳ ಆಧಾರದ ಮೇಲೆ ಲೋಕಾಯುಕ್ತ, ಸಿಬಿಐ ಮತ್ತು ಇಡಿಗೆ ದೂರು ಸಲ್ಲಿಸಲಾಗಿದೆ. ಈಗ ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ಮುನಿರತ್ನ ಆಗ್ರಹಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು