December 19, 2024

Newsnap Kannada

The World at your finger tips!

politics,CM,Delhi

CM : could not meet union minister Amith Shah

ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ

Spread the love

ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾರಣಕ್ಕಾಗಿ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಯಲ್ಲಿ ಹೇಳಿದ್ದಾರೆ.

ಇದನ್ನು ಓದಿ –ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ

ಸಿಎಂ ಬೊಮ್ಮಾಯಿ ಶುಕ್ರವಾರ ದೆಹಲಿಗೆ ದಿಢೀರ್ ಭೇಟಿ ಯಾವ ಉದ್ದೇಶಕ್ಕೆ ಎಂದು ತಿಳಿಸಿರಲಿಲ್ಲ. ಆದರೆ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದೆ. ತುರ್ತು ಕೆಲಸ ಇದ್ದ ಹಿನ್ನೆಲೆ ಅವರನ್ನು ಭೇಟಿಯಾಗಿಲ್ಲ. ಆದರೆ ಫೋನ್‍ನಲ್ಲಿ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಜೊತೆಗೆ ಚರ್ಚೆ ಮಾಡಿದೆ ಎಂದು ತಿಳಿಸಿದರು.

ಈ ಚರ್ಚೆಯಲ್ಲಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ. ಸಂಪುಟ ವಿಸ್ತರಣೆ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದರು
ರಾಜ್ಯದ ಕೆಲವು. ಜಿಲ್ಲೆಗಳ
ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎನ್‍ಡಿಆರ್‌ಎಫ್ ನಿಧಿಯಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು. ಪರಿಸ್ಥಿತಿ ಅವಲೋಕಿಸಿ ದಾವೋಸ್ ಪ್ರವಾಸದ ಬಗ್ಗೆ ನಿರ್ಧಾರ ಮಾಡುವೆ ಎಂದು ಹೇಳಿದರು

Copyright © All rights reserved Newsnap | Newsever by AF themes.
error: Content is protected !!