ನಾಳೆ ನಡೆಯುವ ಪರಿಷತ್ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯಿಂದಾಗಿ ಸಭಾಪತಿ – ಉಪಸಭಾಪತಿ ಆಯ್ಕೆ ಸುಸೂತ್ರವಾಗಿದೆ. ಹೀಗಾಗಿ ಎರಡೂ ಪಕ್ಷಗಳು ಕೊಟ್ಟು ತೆಗೆದುಕೊಳ್ಳುವ ಸೂತ್ರಕ್ಕೆ ಬದ್ಧವಾಗಿವೆ.
ಮೇಲ್ಮನೆಯಲ್ಲಿ ಬಿಜೆಪಿಗೆ ಜೆಡಿಎಸ್ ಅನಿವಾರ್ಯ ಎನ್ನುವಂತಾಗಿದೆ. ಈ ಕಾರಣಕ್ಕಾಗಿ ಬಿಜೆಪಿ ಕೊನೆಗೂ ಜೆಡಿಎಸ್ಗೆ ಸಭಾಪತಿ ಸ್ಥಾನ ಬಿಟ್ಟುಕೊಟ್ಟಿದೆ.
ಬಸವರಾಜ ಹೊರಟ್ಟಿ ಸಭಾಪತಿ:
ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಲು ಜೆಡಿಎಸ್ನ ಬಸವರಾಜ್ ಹೊರಟ್ಟಿ ಸಿದ್ಧತೆ ನಡೆಸಿದ್ದಾರೆ.
ಉಪಸಭಾಪತಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ. ಬಿಜೆಪಿಯ ಅಭ್ಯರ್ಥಿ ಪ್ರಾಣೇಶ್ ಕಣಕ್ಕಿಳಿಯಲಿದ್ದಾರೆ.

ಈಗಾಗಲೇ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಪದಚ್ಯುತಿಗೆ ಬಿಜೆಪಿ ನೋಟಿಸ್ ಕೊಟ್ಟಿದೆ. ಬಹುಮತ ಇಲ್ಲದ ಕಾರಣ ಬಿಜೆಪಿಗೆ ಜೆಡಿಎಸ್ ಅನಿವಾರ್ಯ ವಾಗಿದೆ.
ಬಿಜೆಪಿಯಿಂದ ಉಪ-ಸಭಾಪತಿ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಉಪ ಸಭಾಪತಿ ಸ್ಥಾನಕ್ಕೆ ವಿಧಾನಸೌಧದಲ್ಲಿ ಎಂ.ಕೆ. ಪ್ರಾಣೇಶ್ ನಾಮಪತ್ರ ಸಲ್ಲಿಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು