ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಯಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ 2200 ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಪುಟ್ಟಣ್ಣ ಸತತ ನಾಲ್ಕನೇ ಬಾರಿಗೆ ಜಯ ಸಾಧಿಸಿದ್ದಾರೆ. ಇನ್ನು ಪುಟ್ಟಣ್ಣ ಅವರ ಗೆಲುವಿನ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಈಗಾಗಲೇ ಜೆಡಿಎಸ್‌ನಿಂದ ಮೂರು ಬಾರಿ ಗೆದ್ದಿದ್ದ ಪುಟ್ಟಣ್ಣ ರಾಜಕೀಯ ಬದಲಾವಣೆ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿ ನಾಲ್ಕನೇ ಭಾರಿ ಗೆಲುವು ಸಾಧಿಸಿದ್ದಾರೆ.
ಶಿಕ್ಷಕ ವೃಂದದ ಪರ ನಾನು ಹೋರಾಟ ಮುಂದುವರೆಸುತ್ತೇನೆ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮಾಡುತ್ತೇನೆ ಎಂದು ಪುಟ್ಟಣ್ಣ ಹೇಳಿದ್ದಾರೆ.
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
More Stories
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ