December 23, 2024

Newsnap Kannada

The World at your finger tips!

HD Revanna

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

Spread the love

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಹೆಚ್ ಡಿ ರೇವಣ್ಣ, ಜಾಮೀನು ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ನಾಳೆ ಮಧ್ಯಾಹ್ನದ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು 5 ಲಕ್ಷ ರೂಪಾಯಿ ಬಾಂಡ್ ನೀಡಲು ಮಾಜಿ ಸಚಿವರಿಗೆ ಸೂಚನೆ ನೀಡಿದೆ. ನಾಳೆ ಮಧ್ಯಾಹ್ನ 3 ಗಂಟೆ ವೇಳೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ


ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದ ಸಂತ್ರಸ್ತ ಮಹಿಳೆಯೊಬ್ಬರ ಅಪಹರಣ ಆರೋಪದಲ್ಲಿ SIT ರೇವಣ್ಣ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರಾಗಿದೆ.

Copyright © All rights reserved Newsnap | Newsever by AF themes.
error: Content is protected !!