ವಂಚಕಿ ಚೈತ್ರ ಹೆಸರಿನ ಜೊತೆ ಕುಂದಾಪುರ ಬಳಕೆ ನ್ಯಾಯಾಲಯ ತಡೆಯಾಜ್ಞೆ

Team Newsnap
1 Min Read

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರು ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನ್ಯಾಯಾಲಯವು ನಿರ್ಬಂಧ ಹೇರಿದೆ.

ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಏಕಪಕ್ಷೀಯ ಮಧ್ಯಂತರ ಆದೇಶ ಮಾಡಿದೆ.

ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರು ಉಲ್ಲೇಖಿಸುವುದಕ್ಕೆ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಬಸವನಗುಡಿಯಲ್ಲಿ “ಕಾಫಿ ಶಾಪ್‌” ಹೋಟೆಲ್ ಮಾಲೀಕ ಕುಂದಾಪುರ ಮೂಲದ ಗಣೇಶ್‌ ಶೆಟ್ಟಿ ಸಲ್ಲಿಸಿದ್ದ ಮೂಲ ದಾವೆಯ ವಿಚಾರಣೆಯನ್ನು ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಬಾಲಗೋಪಾಲ ಕೃಷ್ಣ ಅವರು ಆದೇಶಿಸಿದ್ದಾರೆ.

ಸುದ್ದಿ ವಾಹಿನಿ, ಮಾಧ್ಯಮದಲ್ಲಿ ಕುಂದಾಪುರ ಹೆಸರು ಉಲ್ಲೇಖ ಮತ್ತು ಪ್ಯಾನಲ್‌ ಚರ್ಚೆ ನಡೆಸುವುದಕ್ಕೆ ಮುಂದಿನ ಆದೇಶದವರೆಗೆ ತಾತ್ಕಾಲಿಕ ನಿರ್ಬಂಧ ಆದೇಶ ಮಾಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ.

Share This Article
Leave a comment