Main News

ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- CRPFನಿಂದ ರಕ್ಷಣೆಗೆ ಕೋರ್ಟ್​ ಆದೇಶ

ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲೇ ಇರುವ ಜ್ಞಾನವ್ಯಾಪಿ ಮಸೀದಿಯಲ್ಲಿ ನಡೆಯುತ್ತಿರುವ ಸರ್ವೇ ಕಾರ್ಯ ಅಂತ್ಯವಾಗಿದೆ. ಜಿಲ್ಲಾ ನ್ಯಾಯಾಲಯ ನೀಡಿದ ಆದೇಶದ ಮೇರೆಗೆ ಮಸೀದಿಯ ಆವರಣದಲ್ಲಿ ಅಡ್ವೋಕೆಟ್​ ಕಮಿಷನರ್ ಸರ್ವೇ ಕಾರ್ಯ ನಡೆಸಿದ್ದಾರೆ.

ಸರ್ವೇ ಕಾರ್ಯ ನಡೆಸುವ ವೇಳೆ ಗ್ಯಾನವಾಪಿ ಮಸೀದಿಯಲ್ಲಿ ಹಿಂದೂ ದೇಗುಲದ ಕುರುಹುಗಳೂ ಹಾಗೂ ಶಿವಲಿಂಗ ಪತ್ತೆಯಾಗಿದೆ.

ಇನ್ನು ಶಿವಲಿಂಗ ಪತ್ತೆಯಾಗಿರುವ ಪ್ರದೇಶವನ್ನು ಸೀಲ್ ಮಾಡಲು ಕೋರ್ಟ್​ ಸೂಚನೆ ನೀಡಿದೆ. ಜೊತೆಗೆ ಸಿಆರ್​ಪಿಎಫ್​ನಿಂದ ರಕ್ಷಣೆಗೂ ಆದೇಶ ನೀಡಿದೆ.

ಶಿವಲಿಂಗವು 12 ಅಡಿ 8 ಇಂಚು ವ್ಯಾಸವನ್ನು ಹೊಂದಿದೆ. ಅಲ್ಲದೇ ಶಿವಲಿಂಗ ನಂದಿಯತ್ತ ಮುಖ ಮಾಡಿತ್ತು ಎಂದು ವಕೀಲರೊಬ್ಬರು ತಿಳಿಸಿದ್ದಾರೆ. ಜ್ಞಾನವ್ಯಾಪಿ ಮಸೀದಿ ವಿಚಾರದಲ್ಲಿ ಮೊದಲಿನಿಂದಲೂ ವಿವಾದವಿದೆ. 14ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದ್ದ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ಧ್ವಂಸ ಮಾಡಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಕೆಲವು ಇತಿಹಾಸಕಾರರು ವಾದ ಮಂಡಿಸಿದ್ದಾರೆ.

ಇದನ್ನು ಓದಿ :ಕೊಡಗಿನ ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

1809ರಲ್ಲಿಯೇ ಇಲ್ಲಿ ಧಾರ್ಮಿಕ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಘರ್ಷಣೆಗಳು ನಡೆದಿತ್ತು.
ದೆಹಲಿ ಮೂಲದ ಐವರು ಮಹಿಳೆಯರು ರಾಖಿ ಸಿಂಗ್, ಲಕ್ಷ್ಮೀ ದೇವಿ, ಸೀತ ಸಾಹು ಸೇರಿದಂತೆ ಹಲವರು 2021ರ ಏ.18 ರಂದು ಮಸೀದಿ ಕುರಿತಂತೆ ಕೋರ್ಟ್​​ ಮೆಟ್ಟಿಲೇರಿದ್ದರು. ಈ ವೇಳೆ ಮಸೀದಿಯ ಹೊರ ಭಾಗದ ಗೋಡೆಗಳ ಮೇಲಿರುವ ವಿಗ್ರಹಗಳಿಗೆ ಪೂಜೆ ಸಲ್ಲಿಕೆ ಮಾಡಲು ಅನುಮತಿಗಾಗಿ ಮನವಿ ಮಾಡಿ ವಿಗ್ರಹಗಳಿಗೆ ಯಾವುದೇ ಹಾನಿಯಾಗದಂತೆ ಭದ್ರತೆ ನೀಡಲು ಕೋರಿದ್ದರು.

ಕೋರ್ಟ್​ ಆದೇಶದಂತೆ ಸರ್ವೇ ಕಾರ್ಯ ನಡೆಸಲಾಗಿದೆ. ಇದಕ್ಕೂ ಮುನ್ನ ನಾವು ಎಲ್ಲರೊಂದಿಗೂ ಮಾತನಾಡಿದ್ದೇವು. ಆ ವೇಳೆ ನ್ಯಾಯಾಲಯ ಆದೇಶವನ್ನು ಅನುಸರಿಸುವುದು ಮುಖ್ಯ ಎಂದು ತಿಳಿಸಿದ್ದೇವು. ಆ ಮೂಲಕ ಜನರ ತಪ್ಪು ನಂಬಿಕೆಯನ್ನು ಹೋಗಲಾಡಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಿದ್ದೇವೆ. ಮೂರು ದಿನಗಳ ಸಮೀಕ್ಷೆ ಕೊನೆಗೊಂಡಿದೆ ಎಂದು ವಾರಣಾಸಿ ಪೊಲೀಸ್ ಕಮಿಷನರ್ ಸತೀಶ್ ಗಣೇಶ್​ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024