ಭಜರಂಗದಳ ವಿರುದ್ಧ ಅವಹೇಳನಕಾರಿ ಹೇಳಿಕೆ : ಖರ್ಗೆಗೆ ಕೋರ್ಟ್ ಸಮನ್ಸ್

Team Newsnap
1 Min Read

ಭಜರಂಗದಳ ಸಂಘಟನೆಯನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ನೀಡಿದೆ.

ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಭಜರಂಗದಳದ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

100 ಕೋಟಿ ರೂ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪಂಜಾಬ್ ನ ಸಂಗ್ರೂರ್ ನ್ಯಾಯಾಲಯ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ರಮಣದೀಪ್ ಕೌರ್ ಖರ್ಗೆ ಅವರಿಗೆ ಸಮನ್ಸ್ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಸಂವಿಧಾನ ವಿರೋಧಿ ಕೆಲಸ ಮಾಡುವ ಭಜರಂಗದಳ ಹಾಗೂ ಪಿಎಫ್ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಹೇಳಿತ್ತು.

Share This Article
Leave a comment