ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಈಗಾಗಲೇ ಭಾರತದ ಕೆಲವು ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ ಫೆಬ್ರವರಿ ತಿಂಗಳಿಂದ ಮೂರನೇ ಅಲೆ ಭಾರತದಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿ ಪ್ರೊ. ಮಣೀಂದ್ರ ಅಗರವಾಲ್ ತಿಳಿಸಿದ್ದಾರೆ.
ಗಣಿತಶಾಸ್ತ್ರೀಯ ಆಧಾರದ ಮೇಲೆ ಈ ಅಂದಾಜು ಮಾಡಿದ್ದಾರೆ. ಹೊಸ ರೂಪಾಂತರಿ ಓಮಿಕ್ರಾನ್ ಫೆಬ್ರವರಿ ತಿಂಗಳ ವೇಳೆಗೆ ದೇಶದಲ್ಲಿ ಮೂರನೇ ಅಲೆ ಪರಿಣಾಮವನ್ನು ನೋಡಬಹುದಾಗಿದೆ.
ಎರಡನೇ ಅಲೆಗಿಂತ ಸೌಮ್ಯವಾಗಿರುತ್ತದೆ. ಓಮಿಕ್ರಾನ್ ತೀವ್ರತೆಯು ಡೆಲ್ಟಾ ರೂಪಾಂತರದಂತೆ ಕಂಡುಬರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಓಮಿಕ್ರಾನ್‌ನ ಹೆಚ್ಚು ಪ್ರಕರಣಗಳು ವರದಿಯಾಗಿರುವ ದಕ್ಷಿಣ ಆಫ್ರಿಕಾದ ಬೆಳವಣಿಗೆಯನ್ನು ನಾವು ಗಮನಿಸಬಹುದು. ಅಲ್ಲಿ ಈವರೆಗೆ ಯಾರೂ ಆಸ್ಪತ್ರೆಗೆ ಸೇರುವಷ್ಟು ಸಮಸ್ಯೆ ಕಂಡುಬಂದಿಲ್ಲ ಎಂದು ಅಗರವಲ್ ವಿವರಿಸಿದ್ದಾರೆ.
ಓಮಿಕ್ರಾನ್ ಕುರಿತ ಅಂಕಿ-ಅಂಶ ಹಾಗೂ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಸೇರುವವರ ಸಂಖ್ಯೆಯು ವೈರಸ್ ಹರಡುವಿಕೆಯ ಸ್ಪಷ್ಟ ಚಿತ್ರಣವನ್ನು ನೀಡಲಿದೆ. ಓಮಿಕ್ರಾನ್ ಅತಿ ವೇಗವಾಗಿ ಹರಡುತ್ತದೆ ಎಂದು ಹೇಳಲಾಗಿದ್ದರೂ, ಅದರ ಪರಿಣಾಮ ಅಷ್ಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ