ದೇಶದಲ್ಲಿ ಕೋವಿಡ್ ಏರಿಕೆ : 7,830 ಸೋಂಕು ಪತ್ತೆ- 40 ಸಾವಿರ ಸಕ್ರಿಯ ಪ್ರಕರಣಗಳು

Team Newsnap
1 Min Read

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,76,002ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ತಲುಪಿದೆ ಚೇತರಿಸಿಕೊಂಡವರ ಸಂಖ್ಯೆ 4,42,04,771ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ 2,14,242 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,32,67,524 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಚಾಮರಾಜಪೇಟೆಯಲ್ಲಿ ಕಳೆದ 30 ವರ್ಷದಿಂದ ಬಿಜೆಪಿ ಗೆದ್ದಿಲ್ಲ, ಈ ಬಾರಿ ಗೆಲ್ಲುತ್ತೆ : ಮಾಜಿ IPS ಭಾಸ್ಕರ್ ರಾವ್

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,24,326 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Share This Article
Leave a comment