ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ: ನರ್ಸಿಂಗ್ ಕಾಲೇಜಿನ 23 ಕೇರಳವಿದ್ಯಾರ್ಥಿಗಳಿಗೆ ಸೋಂಕು

Team Newsnap
0 Min Read

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದೆ
ಕೇರಳದಿಂದ ಶಿವಮೊಗ್ಗಕ್ಕೆ ಬಂದವರಿಂದಾಗಿ ಮಲೆನಾಡಿನ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದೆ.

ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅನ್ಯರಾಜ್ಯದವರೇ ಹೆಚ್ಚಿದ್ದಾರೆ.

ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಹೀಗೆ ಕೇರಳಕ್ಕೆ ಹೋಗಿ ಬಂದ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು.

Share This Article
Leave a comment